ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್ ಸಾಲು ಸಾಲು ರಜೆ; ಹೆಚ್ಚುವರಿ KSRTC ಬಸ್ ವ್ಯವಸ್ಥೆ!

ಯುಗಾದಿ ಮತ್ತು ರಂಜಾನ್ ಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ. ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ.

ಕೆಎಸ್‍ಆರ್ ಟಿವಿಶೇಸಿಯಿಂದ 1,750 ಬಸ್, ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿಯ 145 ಬಸ್, ಕೆಕೆಆರ್‍ ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು ನಾಲ್ಕು ನಿಗಮಗಳಿಂದ 2,275 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಏ.7 ಭಾನುವಾರ, 9 ಮಂಗಳವಾರ ಯುಗಾದಿ ಹಬ್ಬ, ಗುರುವಾರ ರಂಜಾನ್ ಇದೆ. ಏ.13 ಎರಡನೇ ಶನಿವಾರ ರಜೆ ಹಾಗೂ 14ರಂದು ಭಾನುವಾರದ ರಜೆ ಇದೆ. ಕೆಲವರು ರಜೆ ಹಾಕಿ ಊರಿಗೆ ತೆರಳಲು ತಯಾರಿ ನಡೆಸಿದ್ದಾರೆ. ಒಟ್ಟು 5 ರಜೆಗಳು ಸಿಗಲಿದೆ.

ಸಾಂದರ್ಭಿಕ ಚಿತ್ರ
ಕೆಎಸ್​ಆರ್​ಟಿಸಿ 100 ಹೊಸ ಅಶ್ವಮೇಧ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ವಿದ್ಯಾರ್ಥಿಗಳಿಗೆ ರಜೆ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಲು ತಯಾರಿ ನಡೆಸಿರುವ ಪೋಷಕರಿಗೆ ಇದು ಅನುಕೂಲವಾಗಲಿದೆ. ಈ ಎಲ್ಲ ಕಾರಣಗಳನ್ನು ಮತ್ತು ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ.

ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಕೆಂಪೇಗೌಡ ನಿಲ್ದಾಣ, ಸ್ಯಾಟ್‍ಲೈಟ್ ನಿಲ್ದಾಣ, ಶಾಂತಿನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್ ಸೇವೆ ಮಾಡಲಾಗಿದೆ. ಅಲ್ಲದೇ ನೆರೆರಾಜ್ಯ ಹೈದರಾಬಾದ್, ಚೆನ್ನೈ, ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ ದಲಿತರ ಬಲವರ್ಧನೆ, ದಲಿತ ಮತಗಳ ಕ್ರೂಡೀಕರಣಕ್ಕೆ ಹಲವು ತಂತ್ರ ಹೆಣೆಯಲಾಗುತ್ತಿದೆ. ಕಲಬುರಗಿ, ವಿಜಯಪುರ, ಚಿತ್ರದುರ್ಗ, ಕೋಲಾರ ಮತ್ತು ಚಾಮರಾಜನಗರ ಮೀಸಲು ಕ್ಷೇತ್ರಗಳು ಮತ್ತು ರಾಯಚೂರು, ಬಳ್ಳಾರಿಯ ಎರಡು ಪರಿಶಿಷ್ಟ ಪಂಗಡದ ಕ್ಷೇತ್ರಗಳಲ್ಲಿ ಇದು ಕಾಂಗ್ರೆಸ್​ಗೆ ಪೂರಕವಾಗಿ ಪರಿಣಮಿಸಬಹುದು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಹ ಅಧ್ಯಕ್ಷ ಮತ್ತು ಮಾಜಿ ರಾಜ್ಯಸಭಾ ಸಂಸದ ಮತ್ತು ದಲಿತ ಮುಖಂಡ ಎಲ್.ಹನುಮಂತಯ್ಯ ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com