ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಲ್ಲಿ 28 ಮಂದಿ ಟ್ರಾಮಾ ಕೇರ್ ಸೆಂಟರ್‌ನಲ್ಲಿದ್ದಾರೆ, 13 ಮಂದಿ ಎಚ್ ಬ್ಲಾಕ್‌ನಲ್ಲಿ ಮತ್ತು ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ, ಭೇದಿಯಿಂದ ತ್ರೀವ ಅಸ್ಬಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಅವರಿಗೆ ತೀವ್ರವಾದ ಗ್ಯಾಸ್ಟ್ರೋಎಂಟರೈಟಿಸ್ ಎಂದು ಹೇಳಲಾಗಿದೆ. ಒಂದೇ ಹಾಸ್ಟೆಲ್ನ 47 ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ ಬೆನ್ನಲ್ಲೇ ಕಾಲರಾದ ಶಂಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮಾದರಿಯನ್ನ ವೈದ್ಯರು ಪರೀಕ್ಷೆಗೆ ಕಳುಹಿಸಿದ್ದು, ನಾಳೆ ವಿದ್ಯಾರ್ಥಿನಿಯರ ಪರೀಕ್ಷೆ ವರದಿ ಸಿಗುವ ನಿರೀಕ್ಷೆ ಇದೆ. ಇನ್ನು, ಪ್ರಕರಣದ ಬಳಿಕ ಎಚ್ಚೆತ್ತ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ನ ನೀರನ್ನ ಪರಿಶೀಲಿಸಲು ಸೂಚನೆ ನೀಡಿದೆ.
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಈ ವರ್ಷ ಇದುವರೆಗೆ ಆರು ಕಾಲರಾ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ ಐದು ಮಾರ್ಚ್‌ನಲ್ಲಿ ವರದಿಯಾಗಿದೆ. ನೀರಿನ ಬಿಕ್ಕಟ್ಟಿನೊಂದಿಗೆ ತೀವ್ರವಾದ ಶಾಖವು ಕಾಲರಾ ಏಕಾಏಕಿ ಭೀತಿಗೆ ಕಾರಣವಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ