ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕಾರಿನಲ್ಲಿ ತೆರಳುತಿದ್ದ ವ್ಯಕ್ತಿ ಅಡ್ಡಗಟ್ಟಿ ಯುವಕರ ಪುಂಡಾಟ!

ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ಬೆಳಕಿಗೆ ಬಂದಿದ್ದು, ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಯುವಕರು, ಕಾರನ್ನು ಹಿಂಬಾಲಿಸಿ ವ್ಯಕ್ತಿಗೆ ಕಿರುಕುಳ ನೀಡಿದ ಘಟನೆ ಸೇಂಟ್ ಜಾನ್ಸ್ ಆಸ್ಪತ್ರೆ ಬಳಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ಬೆಳಕಿಗೆ ಬಂದಿದ್ದು, ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಯುವಕರು, ಕಾರನ್ನು ಹಿಂಬಾಲಿಸಿ ವ್ಯಕ್ತಿಗೆ ಕಿರುಕುಳ ನೀಡಿದ ಘಟನೆ ಸೇಂಟ್ ಜಾನ್ಸ್ ಆಸ್ಪತ್ರೆ ಬಳಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ಇಂದಿರಾನಗರದ ಶ್ರೀಕೃಷ್ಣ ದೇವಸ್ಥಾನ ರಸ್ತೆಯ ನಿವಾಸಿ ಆರ್ ಶಿವಕುಮಾರ್ ದೂರಿ ನೀಡಿದ ವ್ಯಕ್ತಿಯಾಗಿದ್ದಾರೆ. ಶಿವಕುಮಾರ್ ತಮ್ಮ ಒಂದೂವರೆ ವರ್ಷದ ಮಗು ಹಾಗೂ ಮಡದಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದರು. ಗ್ಯಾಸ್ ಸ್ಟೇಷನ್ ಗೆ ತೆರಳು ಇಂಡಿಕೇಟರ್ ಹಾಕದೆ ತಿರುವು ತೆಗೆದುಕೊಂಡಿದ್ದಾರೆ.

ಈ ವೇಳೆ ಹಿಂಬದಿಯಲ್ಲಿ ತಮಿಳುನಾಡು ನೋಂದಾಯಿತ ಮೋಟಾರು ಬೈಕ್ ನಲ್ಲಿ ಬಂದ ಮೂವರು ಯುವಕರು, ಕಾರು ನಿಲ್ಲಿಸುವಂತೆ ಗಲಾಟೆ ಮಾಡಿದ್ದಾರೆ. ಕಾರು ನಿಲ್ಲಿಸಿದ ಬಳಿಕ ಶಿವಕುಮಾರ್ ಅವರಿಗೆ ಯುವಕರು ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಪತ್ನಿಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಸಂಗ್ರಹ ಚಿತ್ರ
ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳಿಗೆ ಶೂನ್ಯ ಸಹಿಷ್ಣುತೆ ಇದೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್

ಈ ವೇಳೆ ಶಿವಕುಮಾರ್ ಅವರು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೂವರ ಪೈಕಿ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಘಟನೆ ಬಳಿಕ ಶಿವಕುಮಾರ್ ಅವರು, ಕೆಆರ್ ಪುರಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಘಟನೆ ಸಂಬಂಧ ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ನನ್ನ ಮೇಲೆ ಹಲ್ಲೆ ನಡೆಸಿದರು. ಇದರಿಂದ ರಕ್ತಸ್ರಾವವಾಗಿತ್ತು. ಆರೋಪಿಗಳ ಬೈಕ್ ನ್ನು ನಾನು ತಡೆದಿದ್ದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಮೂವರು ಆರೋಪಿಗಳಲ್ಲಿ ಇಬ್ಬರನ್ನು ಪರಶುರಾಮ್ ಮತ್ತು ಮಣಿ ಎಂದು ಗುರುತಿಸಲಾಗಿದೆ. ಒಬ್ಬನನ್ನು ಸ್ಥಳದಲ್ಲೇ ಬಂಧನಕ್ಕೊಳಪಡಿಸಿ, ಬೈಕನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ವೈಟ್‌ಫೀಲ್ಡ್ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com