ಡ್ರಿಂಕ್‌ ಆ್ಯಂಡ್‌ ಡ್ರೈವ್‌: ಚುನಾವಣಾ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರ ತಪಾಸಣೆ ತೀವ್ರ!

ಸುರಕ್ಷಿತ ಮತ್ತು ಶಾಂತಿಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು, ಮದ್ಯಪಾನದಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಂಚಾರಿ ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಗಳನ್ನು ತೀವ್ರಗೊಳಿಸಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಬೆಂಗಳೂರು: ಸುರಕ್ಷಿತ ಮತ್ತು ಶಾಂತಿಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು, ಮದ್ಯಪಾನದಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಂಚಾರಿ ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಗಳನ್ನು ತೀವ್ರಗೊಳಿಸಿದ್ದಾರೆ.

ಚುನಾವಣಾ ಅಕ್ರಮಗಳ ಮೇಲೆ ನಿಗಾ ಇಡಲು ಭಾರತೀಯ ಚುನಾವಣಾ ಆಯೋಗವು ನಗರದಾದ್ಯಂತ 102 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದು, ಪ್ರತಿ ಚೆಕ್‌ಪೋಸ್ಟ್‌ ನಲ್ಲಿಯೂ ಬ್ರೀತ್‌ಅಲೈಸರ್‌ನೊಂದಿಗೆ ಒಬ್ಬ ಟ್ರಾಫಿಕ್ ಪೋಲೀಸ್ ನೇಮಿಸಿದ್ದಾರೆ. ಈ ಅಧಿಕಾರಿಗಳು ವಾಹನ ಸವಾರರನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಸಾಂಕೇತಿಕ ಚಿತ್ರ
ನೀತಿ ಸಂಹಿತೆ ಜಾರಿ: ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ, ಅಗತ್ಯ ದಾಖಲೆಗಳ ಇಟ್ಟುಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಮಾತನಾಡಿ “ಏಪ್ರಿಲ್ 1 ರಿಂದ ಪ್ರತಿ ಚೆಕ್‌ಪೋಸ್ಟ್‌ನಲ್ಲಿಯೂ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳನ್ನು ಪರಿಶೀಲಿಸಲು ಆಲ್ಕೋಹಾಲ್ ಮೀಟರ್ ಹೊಂದಿರುವ ಟ್ರಾಫಿಕ್ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿದೆ. ನಗರದಲ್ಲಿ ಕಾನೂನುಬಾಹಿರ ಚಟುವಟಿಕೆಗಳು, ಹೊಡೆದಾಟ-ಬಡಿದಾಟಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ. ಏಪ್ರಿಲ್ 1-3 ರವರೆಗೂ ಸಂಚಾರ ಪೊಲೀಸರು 6,863 ವಾಹನಗಳನ್ನು ಪರಿಶೀಲಿಸಿದ್ದಾರೆ ಮತ್ತು 83 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಚುನಾವಣೆ ಮುಗಿಯುವವರೆಗೂ ಈ ಉಪಕ್ರಮ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಎಲ್ಲಾ 2,041 ಹೊಯ್ಸಳ ಗಸ್ತು ವಾಹನಗಳ ಒಳಗೆ ಮತ್ತು ಹೊರಗೆ ಎರಡು ಡ್ಯಾಶ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com