ಕೇಂದ್ರ ಸರ್ಕಾರದಿಂದ ರಾಜ್ಯಕ್ಕಾಗಿರುವ ಅನ್ಯಾಯದ ಕುರಿತು ಚರ್ಚೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, 'ಆರ್ಥಿಕತೆ ಹಾಗೂ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಸತ್ಯ ಹಾಗೂ ವಾಸ್ತವದ ನೆಲೆಯಲ್ಲಿ ಚರ್ಚೆ ನಡೆಸಲು ನಾಗರಿಕ ಸಮಾಜ ನೀಡಿರುವ ಆಹ್ವಾನವನ್ನು ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು, ಕೇಂದ್ರ ಹಣಕಾಸು ಸಚಿವರನ್ನು ಮುಕ್ತ ಚರ್ಚೆಗೆ ಆಹ್ವಾನಿಸಿದ್ದೇವೆ. ಅವರು ಭಾಗವಹಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಈ ನಡುವೆ ಶನಿವಾರ ಸಂಜೆ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತಿ ಕರ್ನಾಟಕ ಮತ್ತು ಕೆಲವು ಕನ್ನಡ ಪರ ಸಂಘಟನೆಗಳು ಸಚಿವರನ್ನು ಚರ್ಚೆಗೆ ಆಹ್ವಾನಿಸಿವೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ
ವಿಶೇಷ ಅನುದಾನ ಹಿಂಪಡೆದು, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ನಿರ್ಮಲಾ ಸೀತಾರಾಮನ್ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಆರೋಪ

ಜಾಗೃತ ಕರ್ನಾಟಕ ಸದಸ್ಯ ರಾಜಶೇಖರ್ ಅಕ್ಕಿ ಮಾತನಾಡಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದು ಚರ್ಚೆಗೆ ಆಹ್ವಾನಿಸಿದ್ದೇವೆ. ಅವರು ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದಾಗ ಮತ್ತು ಹಲವಾರು ಸಂದರ್ಭಗಳಲ್ಲಿ ಕರ್ನಾಟಕವು ಕೇಂದ್ರದಿಂದ ತನ್ನ ಪಾಲಿನ ಹಣವನ್ನು ಪಡೆದಿದೆ ಎಂದು ಹೇಳಿದ್ದರು, ಆದರೆ, ರಾಜ್ಯ ಸಚಿವರು ಇಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಈ ವಿಚಾರ ಕುರಿತು ಬಹಿರಂಗ ಚರ್ಚೆಗೆ ಆಹ್ವಾನಿಸಲಾಗಿದೆ. ಕೇಂದ್ರ ಸಚಿವರಿಗೆ ಇಮೇಲ್ ಮೂಲಕ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಚುನಾವಣಾ ಸಮಯದಲ್ಲಿ ಇಂತಹ ಪ್ರಯತ್ನಗಳು ನಡೆಯುತ್ತಿವೆ. ಇದು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಬಣ್ಣಿಸಿದೆ.

ಸೀತಾರಾಮನ್ ಶನಿವಾರ ಬೆಂಗಳೂರಿನಲ್ಲಿಯೇ ಇರುತ್ತಾರೆ, ಆದರೆ, ಈ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಸೀತಾರಾಮನ್ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದ ಬಗ್ಗೆ ಹಲವಾರು ಸಂದರ್ಭಗಳಲ್ಲಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com