ಮಂಡ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 21 ವರ್ಷ ಸೆರೆವಾಸ!

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ1.16 ಲಕ್ಷ ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ನಾಗಜ್ಯೋತಿ.ಕೆ.ಎ. ತೀರ್ಪು ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಡ್ಯ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ1.16 ಲಕ್ಷ ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ನಾಗಜ್ಯೋತಿ.ಕೆ.ಎ. ತೀರ್ಪು ನೀಡಿದ್ದಾರೆ.

ತಮಿಳುನಾಡು ಮೂಲದ ಅಣ್ಣಾಮಲೈ ಅವರ ಮಗ ವೆಂಕಟೇಶ್ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಈತ ಪೀಣ್ಯದ ಎರಡನೇ ಹಂತದಲ್ಲಿ ವಾಸವಾಗಿದ್ದ, 2020ರಲ್ಲಿ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಕೆ.ಆರ್.ಪೇಟೆ ತಾಲೂಕು, ಕೊಡಗಹಳ್ಳಿ ಗ್ರಾಮಕ್ಕೆ ಬೆಂಗಳೂರಿನಿಂದ ಸಾರಿಗೆ ಬಸ್‍ನಲ್ಲಿ ತೆರಳುತ್ತಿದ್ದಳು. ಸಹ ಪ್ರಯಾಣಿಕ ಆರೋಪಿ ವೆಂಕಟೇಶ್ ಪರಿಚಯ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಕೆಆರ್ ಪೇಟೆ ತಾಲೂಕಿನ ಬದಲು ನಾಗಮಂಗಲ ಪಟ್ಟಣದಲ್ಲಿ ವೆಂಕಟೇಶ್ ಹಾಗೂ ಬಾಲಕಿ ಬಸ್ ನಿಂದ ಇಳಿದಿದ್ದರು. ಅಲ್ಲಿಂದ ಯುವತಿಯನ್ನು ಬಸ್ಸಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ತಮಿಳುನಾಡಿನ ಕೊಯಮತ್ತೂರಿನ ಧನಲಕ್ಷ್ಮಿ ನಗರಕ್ಕೆ ಕರೆದುಕೊಂಡು ಹೋಗಿದ್ದ.

ಸಾಂದರ್ಭಿಕ ಚಿತ್ರ
ಶೃಂಗೇರಿ ಪ್ರಕರಣ: ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಲೇಔಟ್‌ ಒಂದರಲ್ಲಿ ಬಾಡಿಗೆ ಮನೆ ಪಡೆದು ಆ.21ರಂದು ವೆಂಕಟೇಶ್‌ ಬಾಲಕಿಗೆ ಮಂಗಳಸೂತ್ರ ಕಟ್ಟಿ ‘ಮದುವೆ’ ಮಾಡಿಕೊಂಡಿದ್ದ ಬಳಿಕ ಅಪ್ರಾಪ್ತೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಸಂಬಂಧ ನಾಗಮಂಗಲ ಟೌನ್ ಠಾಣೆಯಲ್ಲಿ ಫೋಕ್ಸೋ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com