ಸಾಂಕ್ರಾಮಿಕ ರೋಗ ತಡೆಗೆ ಸಹಕಾರ ನೀಡಿ: BWSSB ಗೆ ಬಿಬಿಎಂಪಿ ಪತ್ರ

ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಹಕಾರ ನೀಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಹಕಾರ ನೀಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಜಲಮಂಡಳಿಯ ಪಾತ್ರವು ನಿರ್ಣಾಯಕವಾಗಿದೆ ಎಂದು ಪತ್ರದಲ್ಲಿ ತಿಳಿಸಿರುವ ಅವರು, BWSSB ಅನುಸರಿಸಬೇಕಾದ ಕ್ರಮಗಳನ್ನು ಪಟ್ಟಿ ಮಾಡಿದ್ದಾರೆ.

ಬಿಬಿಎಂಪಿ
ಇಬ್ಬರಲ್ಲಿ ಕಾಲರಾ ದೃಢ, ಹಾಸ್ಟೆಲ್ ಖಾಲಿ ಮಾಡಿದ ಮೆಡಿಕಲ್ ವಿದ್ಯಾರ್ಥಿನಿಯರು, ಆರೋಗ್ಯ ಇಲಾಖೆ ಆಲರ್ಟ್!

ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಗಾಗಿ ನೀರಿನ ಮಾದರಿಗಳನ್ನು ಹಿರಿಯ ಆರೋಗ್ಯ ಪರಿವೀಕ್ಷಕರು ಸಂಗ್ರಹಿಸಿ ಪಿಎಚ್ಐ ಲ್ಯಾಬ್ಗೆ ಪ್ರತಿನಿತ್ಯ ಕಳುಹಿಸಬೇಕು.

ಸಾಂಕ್ರಾಮಿಕ ರೋಗಗಳು ವರದಿಯಾದ ಪ್ರದೇಶಗಳಲ್ಲಿನ ಮ್ಯಾನ್‌ಹೋಲ್‌ಗಳು ಮತ್ತು ಚರಂಡಿಗಳಿಂದ ಮಾದರಿಗಳನ್ನು ಸಂಗ್ರಹಿಸಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು.

ನೀರಿನ ಪೈಪ್‌ಗಳು ಸೋರಿಕೆಯಾಗುತ್ತಿದೆಯೇ ಎಂದು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com