ಲೋಕಸಭಾ ಚುನಾವಣೆಗೆ ಭರ್ಜರಿ ಪ್ರಚಾರ: ಕೋಲಾರದಿಂದ ಕಾಂಗ್ರೆಸ್ ರಣಕಹಳೆ, ಸಿದ್ದು-ಡಿಕೆಶಿ ರ‍್ಯಾಲಿ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಕೋಲಾರ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಕೋಲಾರದಲ್ಲಿ ಕಾಂಗ್ರೆಸ್ ಪ್ರಚಾರ
ಕೋಲಾರದಲ್ಲಿ ಕಾಂಗ್ರೆಸ್ ಪ್ರಚಾರ

ಕೋಲಾರ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಕೋಲಾರ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಶನಿವಾರ ಕುರುಡುಮಲೆ ಸನ್ನಿಧಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿ, ಕಾಂಗ್ರೆಸ್ ಅಭ್ಯರ್ಥಿ ಗೌತಮ್‌ ಪರ ಮತಯಾಚನೆ ಶುರು ಮಾಡಿದರು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇಗುಲಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಪೂರ್ಣಕುಂಭ ಸ್ವಾಗತ ಕೋರಿದರು.

ನಂತರ ಪ್ರಚಾರಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. . ರಾಜ್ಯದ ಜನತೆ ಬಿಜೆಪಿಯ ಯಾವುದೇ ಆಶ್ವಾಸನೆಗಳನ್ನು ನಂಬಬಾರದು, ಆ ಪಕ್ಷ ಸುಳ್ಳಿನ ಕಾರ್ಖಾನೆಯಾಗಿ ಮಾರ್ಪಟ್ಟಿದೆ. ಇದೀಗ ಸೋಲಿನ ಭೀತಿಯಲ್ಲಿದ್ದಾರೆಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಯಂತೆಯೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ತಳಮಟ್ಟದಿಂದ ಬೆಳೆದು ಬಂದಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ಮ ಅವರಿಗೆ ಟಿಕೆಟ್ ನೀಡಿದೆ. ಜನರು ಅವರನ್ನು ಬೆಂಬಲಿಸಬೇಕೆಂದ ಮನವಿ ಮಾಡಿದರು.

ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರಂಟಿಗಳಿಗೆ ಐದು ವರ್ಷಗಳ ವಾರಂಟಿ ಇದೆ. ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿದೆ. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಸಂಕಷಟವನ್ನು ಕಡಿಮೆ ಮಾಡುವ ಉದ್ದೇಶದಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಅಧಿಕಾರಕ್ಕೆ ಬಂದು 8 ತಿಂಗಳಲ್ಲಿ ಐದನ್ನೂ ಜಾರಿಗೆ ತಂದಿದ್ದೇವೆ.

ಕೋಲಾರದಲ್ಲಿ ಕಾಂಗ್ರೆಸ್ ಪ್ರಚಾರ
ಇಂಡಿಯಾ ಒಕ್ಕೂಟದ 10 ರಾಜಕೀಯ ಪಕ್ಷಗಳು ಕಾಂಗ್ರೆಸ್ ಬೆಂಬಲಿಸುತ್ತಿವೆ: ಡಿಕೆ ಶಿವಕುಮಾರ್

ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವ ಇಲ್ಲ ಇನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತ್ತು. ಈಗ ಗ್ಯಾರಂಟಿಗಳು ನಿಂತು ಹೋಗೋತುತ್ತದೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮೀ ಯೋಜನೆಯಂತೆ ಮಹಾಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗುವುದು. ನಿನ್ನೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಕೂಡ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದರೆ 5 ನ್ಯಾಯ ಯೋಜನೆಗಳ ಮೂಲಕ 25 ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದ್ದಾರೆ. ಗೃಹಲಕ್ಷ್ಮಿ ಮಾದರಿಯಲ್ಲಿ ಮಹಾಲಕ್ಷ್ಮಿ ಯೋಜನೆ ಮೂಲಕ ವರ್ಷಕ್ಕೆ 1 ಲಕ್ಷ ಹಣವನ್ನು ಬಡ ಕುಟುಂಬದ ಮಹಿಳೆಯೊಬ್ಬಳಿಗೆ ನೀಡಲಾಗುವುದು. ಇನ್ನು ಯುವಕರಿಗೆ ವಾರ್ಷಿಕ 1 ಲಕ್ಷ ಶಿಷ್ಯ ವೇತನ ನೀಡಲಾಗುವುದು. ರೈತರಿಗೆ ಸಾಲ ಮನ್ನಾ ಹಾಗೂ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ. ನರೇಗಾ ಕೂಲಿ 400 ರೂ. ನೀಡಲಾಗುವುದು. 25 ಲಕ್ಷವರೆಗಿನ ಆರೋಗ್ಯ ವಿಮೆ ನೀಡಲಾಗುವುದು. ಇದು ಹಸ್ತದ ಗುರುತಿನ ಗ್ಯಾರಂಟಿ ಯೋಜನೆಗಳು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com