ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ FIR ದಾಖಲು

ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿದ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಈಶ್ವರಪ್ಪ ಅವರು, ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಕೆಎಸ್ ಈಶ್ವರಪ್ಪ
Lok Sabha Elections 2024: ಪ್ರಚಾರದಲ್ಲಿ ಪ್ರಧಾನಿ ಮೋದಿ ಫೋಟೊ ಬಳಕೆ; ಕೋರ್ಟ್ ಮೊರೆ ಹೋದ ಕೆ.ಎಸ್‌. ಈಶ್ವರಪ್ಪ

ತರುವಾಯ ಹತ್ತಿರದ ಅರ್ಚಕರ ನಿವಾಸದ ಅಂಗಳದಲ್ಲಿ ಸುಮಾರು 50 ರಿಂದ 60 ವ್ಯಕ್ತಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಸಭೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತಾತ್ಕಾಲಿಕ ವೇದಿಕೆಯನ್ನು ನಿರ್ಮಿಸಿ, 50 ಕುರ್ಚಿಗಳು ಮತ್ತು ಹ್ಯಾಂಡ್‌ಹೆಲ್ಡ್ ಮೈಕ್‌ ವ್ಯವಸ್ಥೆ ಮಾಡಿದ್ದು, ಈಶ್ವರಪ್ಪ ರಾಜಕೀಯ ಉದ್ದೇಶದಿಂದ ಭಾಷಣ ಮಾಡಿದ್ದರು ಎಂದು ತಿಳಿದುಬಂದಿದೆ.

ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಶನಿವಾರ ಚುನಾವಣಾ ಆಯೋಗದ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಮೇರೆಗೆ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com