ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ದೂರು

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ದಿನೇಶ್ ಗುಂಡೂರಾವ್​ ಅವರ ಪತ್ನಿ ಟಬು ರಾವ್ ಅವರು ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಟಬು ದಿನೇಶ್ ಗುಂಡೂರಾವ್
ಟಬು ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ​ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ದಿನೇಶ್ ಗುಂಡೂರಾವ್​ ಅವರ ಪತ್ನಿ ಟಬು ರಾವ್ ಅವರು ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಇಂದು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ಟಬು ರಾವ್ ದೂರು ನೀಡಿದ್ದು, ನನ್ನ ಪತಿ ದಿನೇಶ್ ಗುಂಡೂರಾವ್ ಮತ್ತು ನಮ್ಮ ಕುಟುಂಬದ ಬಗ್ಗೆ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್​ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ಟಬು ದಿನೇಶ್ ಗುಂಡೂರಾವ್
HDK ಗೆ ತಮ್ಮ ತಪ್ಪಿನ ಅರಿವಾಗುತ್ತಿದೆ; BJP ಯಿಂದ JDS ಮುಗಿಸುವ ಕೆಲಸ: ದಿನೇಶ್ ಗುಂಡೂರಾವ್

ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಬು ರಾವ್, ಭಾರತ ಮಾತೆ ಅಂತಾರೆ, ಇದೇನಾ ಇವರು ಕೊಡುವ ಗೌರವ? ಸಂಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದೇವೆ. ನಾನು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ದಿನೇಶ್ ಬಗ್ಗೆ ಮಾತನಾಡಿದರೆ ಪರ್ವಾಗಿಲ್ಲ, ನಮ್ಮ ಬಗ್ಗೆ ಏಕೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಏಪ್ರಿಲ್ 6 ರಂದು ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com