ಬಳ್ಳಾರಿಯಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ; 5 ಕೋಟಿ ರೂ. ನಗದು, 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ವಶ!

ಲೋಕಸಭಾ ಚುನಾವಣೆಯಿಂದಾಗಿ ಮಾದರಿ ನೀತಿ ಸಂಹಿತೆ ಜಾರಿ ಹೊತ್ತಿನಲ್ಲಿ ಬಳ್ಳಾರಿಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು ದಾಖಲೆ ಇಲ್ಲದ 5.6 ಕೋಟಿ ರೂಪಾಯಿ ನಗದು ಹಾಗೂ 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ನಗದು, ಚಿನ್ನಾಭರಣ ವಶ
ನಗದು, ಚಿನ್ನಾಭರಣ ವಶ

ಬಳ್ಳಾರಿ: ಲೋಕಸಭಾ ಚುನಾವಣೆಯಿಂದಾಗಿ ಮಾದರಿ ನೀತಿ ಸಂಹಿತೆ ಜಾರಿ ಹೊತ್ತಿನಲ್ಲಿ ಬಳ್ಳಾರಿಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು ದಾಖಲೆ ಇಲ್ಲದ 5.6 ಕೋಟಿ ರೂಪಾಯಿ ನಗದು ಹಾಗೂ 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬುವವರ ಬ್ರೂಸ್‌ಪೇಟೆ ಮನೆ ಮೇಲೆ ದಾಳಿ ನಡೆಸಿದ ಬಳ್ಳಾರಿ ಪೊಲೀಸರು ಅಪಾರ ಪ್ರಮಾಣದ ನಗದು, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ನರೇಶ್ ಸೋನಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ನಗದು, ಚಿನ್ನಾಭರಣ ವಶ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲು

ಇನ್ನು ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 98 ಕೆಪಿ ಆ್ಯಕ್ಟ್ ಅಡಿ ಪ್ರಕರಣವನ್ನು ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಇದನ್ನು ಹಸ್ತಾಂತರ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com