ಇಬ್ಬರಲ್ಲಿ ಕಾಲರಾ ದೃಢ: ಹಾಸ್ಟೆಲ್ ಖಾಲಿ ಮಾಡಿದ ಮೆಡಿಕಲ್ ವಿದ್ಯಾರ್ಥಿನಿಯರು, ಆರೋಗ್ಯ ಇಲಾಖೆ ಅಲರ್ಟ್!

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್‌ಐ) ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ. ಇದರಿಂದ ಆತಂಕಗೊಂಡ ಉಳಿದ ವಿದ್ಯಾರ್ಥಿಗಳು ಹಾಸ್ಟೆಲ್ ಖಾಲಿ ಮಾಡುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್‌ಐ) ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ. ಇದರಿಂದ ಆತಂಕಗೊಂಡ ಉಳಿದ ವಿದ್ಯಾರ್ಥಿಗಳು ಹಾಸ್ಟೆಲ್ ಖಾಲಿ ಮಾಡುತ್ತಿದ್ದಾರೆ.

ಬೇಧಿ ಮತ್ತು ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾದ 47 ವಿದ್ಯಾರ್ಥಿಗಳ ಪೈಕಿ, 22 ವಿದ್ಯಾರ್ಥಿನಿಯರಲ್ಲಿ ಕಾಲರಾ ಟೆಸ್ಟ್ ಮಾಡಲಾಗಿದ್ದು, ಇಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ 21 ವಿದ್ಯಾರ್ಥಿನಿಯರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಇಬ್ಬರು ವಿದ್ಯಾರ್ಥಿನಿಯರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಎಂಸಿಆರ್ ತಿಳಿಸಿದೆ.

ಸಾಂದರ್ಭಿಕ ಚಿತ್ರ
ಬೆಂಗಳೂರಿನಲ್ಲಿ ಆತಂಕ ಹುಟ್ಟಿಸಿದ ಕಾಲರಾ: ಎಚ್ಚೆತ್ತ ಬಿಬಿಎಂಪಿ, ಮಾರ್ಗಸೂಚಿ ಬಿಡುಗಡೆ

ಕಾಲರಾ ಸೋಂಕು ಭೀತಿಯಿಂದ ಕೆಲವು ಮೆಡಿಕಲ್ ವಿದ್ಯಾರ್ಥಿನಿಯರು ಲಗೇಜ್ ಸಮೇತ ಹಾಸ್ಟೆಲ್ ಖಾಲಿ ಮಾಡಿದರೆ ಇನ್ನೂ ಕೆಲವರು ಬೇರೆ ಹಾಸ್ಟೆಲ್‍ಗೆ ಸ್ಥಳಾಂತರವಾಗುತ್ತಿದ್ದಾರೆ.ಉಳಿದುಕೊಂಡ ವಿದ್ಯಾರ್ಥಿನಿಯರು ಆಹಾರಕ್ಕಾಗಿ ಸ್ವಿಗ್ಗಿ, ಝೋಮೆಟೋ ಮೊರೆ ಹೋಗುತ್ತಿದ್ದಾರೆ. ಹಾಸ್ಟೆಲ್ ನಿಂದ ಸ್ವಲ್ಪ ದಿನಕ್ಕಾಗಿ ಮನೆ ಹಾಗೂ ಬೇರೆಡೆ ಇರಲು ಬ್ಯಾಗ್ ಸಮೇತ ವಿದ್ಯಾರ್ಥಿನಿಯರು ಹೋಗುತ್ತಿದ್ದಾರೆ. ಕೆಲವರು ಊರಿಗೆ ತೆರಳಿದರೆ, ಅನೇಕರು ಸಂಬಂಧಿಕರು, ಸ್ನೇಹಿತರ ಮನೆಗೆ ಹೋಗುತ್ತಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ; ಹೆಚ್ಚಿದ ಆತಂಕ, ಆರೋಗ್ಯ ಇಲಾಖೆ ಅಲರ್ಟ್!

ಕಾಲರಾ ಹೆಚ್ಚು ಜನರಿಗೆ ಹರಡದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ. BMCRI ಹಾಸ್ಟೆಲ್ ಅಡುಗೆಮನೆಯನ್ನು ಮುಚ್ಚಿದ ನಂತರ ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಅಡುಗೆಮನೆಯಿಂದ ಆಹಾರ ಮತ್ತು ನೀರು ಸರಬರಾಜು ಮಾಡಲಾಗಿದ್ದು, ಕೀಟ ನಿಯಂತ್ರಣ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತ ಆಡಳಿತ ಮಂಡಳಿಯು ವಾರದೊಳಗೆ ಹಾಸ್ಟೆಲ್ ನ ಸಮಸ್ಯೆ ಸರಿಪಡಿಸೋದಾಗಿ ಹೇಳಿದೆ. ಆದರೆ ಕುಡಿಯುವ ನೀರಿನ ಸಮಸ್ಯೆ, ಸರಿಯಾದ ಊಟದ ವ್ಯವಸ್ಥೆ ಇಲ್ಲದಿದ್ದರಿಂದ ಸಮಸ್ಯೆ ಬಗೆಹರಿಯೋವರೆಗೂ ಬೇರೆಡೆ ಇರಲು ವಿದ್ಯಾರ್ಥಿನಿಯರು ನಿರ್ಧಾರ ಮಾಡಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್‌ ವಾರ್ಡನ್‌ ಡಾ.ಅಖಿಲಾಂಡೇಶ್ವರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ. ಹಾಸ್ಟೆಲ್‌ಗಳ ನಿರ್ವಹಣೆಗಾಗಿ ಸಮಿತಿ ರಚಿಸಲು ಮತ್ತು ಮಾಸಿಕ ಸಭೆ ನಡೆಸಲು, ತಿಂಗಳಿಗೊಮ್ಮೆ ಹಾಸ್ಟೆಲ್‌ ಆವರಣಕ್ಕೆ ಭೇಟಿ ನೀಡಲು ಬಿಎಂಸಿಆರ್‌ಐ ಡೀನ್‌ ಮತ್ತು ನಿರ್ದೇಶಕರಿಗೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com