ದಿನೇಶ್ ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ​ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR
ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ​ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಚಿವ ದಿನೇಶ್ ಗುಂಡೂರಾವ್​ ಅವರ ಪತ್ನಿ ಟಬು ರಾವ್ ಅವರು ಭಾನುವಾರ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ನಿನ್ನೆ ಟಬು ರಾವ್ ಅವರು, ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ಟಬು ರಾವ್ ದೂರು ನೀಡಿದ್ದು, ನನ್ನ ಪತಿ ದಿನೇಶ್ ಗುಂಡೂರಾವ್ ಮತ್ತು ನಮ್ಮ ಕುಟುಂಬದ ಬಗ್ಗೆ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದರು.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR
ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ದೂರು

ಅದರಂತೆ ದೂರು ಸ್ವೀಕರಿಸಿದ್ದ ಪೊಲೀಸರು, ಯತ್ನಾಳ್ ವಿರುದ್ಧ ಐಪಿಸಿ ಸೆಕ್ಷನ್ 153 ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ತಬಸ್ಸುಮ್ ಅವರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 'ಬಸನಗೌಡ ಪಾಟೀಲ್ ಯತ್ನಾಳ್ ಯಾರೆಂದು ನನಗೆ ಗೊತ್ತಿಲ್ಲ. ದಿನೇಶ್ ಗುಂಡೂರಾವ್ ಅವರ ಮನೆ ಅರ್ಧ ಪಾಕಿಸ್ತಾನವಾಗಿದೆ ಎಂದು ಅವರು ಹೇಳಿದ್ದಾರೆ. ಅವರು ಆ ರೀತಿ ಏಕೆ ಹೇಳಿದ್ದಾರೆಂದು ನನಗೆ ತಿಳಿದಿಲ್ಲ ಎಂದರು.

ಅಂತೆಯೇ ನಾನು ರಾಜಕೀಯದಲ್ಲಿಲ್ಲ. ಇದು ಬಿಜೆಪಿಯ ರಾಜಕೀಯವೇ? ಅವರು ಸಮಸ್ಯೆಗಳ ಬಗ್ಗೆ ಮಾತನಾಡಬಹುದು. ಅವರು ಭಾರತ ಮಾತೆ ಎಂದು ಹೇಳುತ್ತಾರೆ. ಆದರೆ ಅವರು ಮಹಿಳೆಯರನ್ನು ಗೌರವಿಸುವುದಿಲ್ಲವೇ? ದಿನೇಶ್ ರಾಜಕೀಯದಲ್ಲಿದ್ದಾರೆ. ಅವರು (ಯತ್ನಾಳ್) ಅವರ ಬಗ್ಗೆ ಮಾತನಾಡಿದರೆ ನನಗೆ ಯಾವುದೇ ತೊಂದರೆ ಇಲ್ಲ. ಆದರೆ ಇದರಲ್ಲಿ ನನ್ನನ್ನು ಎಳೆದು ತರುವುದು ನನಗೆ ಇಷ್ಟವಿಲ್ಲ. ನಾನು ಮುಸ್ಲಿಂ ಟೀಕೆಗಳಿಂದ ಬೇಸತ್ತಿದ್ದೇನೆ. ಇನ್ನೂ ನೀವು ಇದನ್ನು ಎಷ್ಟು ದಿನ ಮಾಡುತ್ತೀರಿ ಎಂದು ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com