ಕರ್ನಾಟಕಕ್ಕೆ ಕೇಂದ್ರ ಅನ್ಯಾಯ ಮಾಡಿದೆ: ಬರ ಪರಿಹಾರ ವಿಳಂಬ ಒಪ್ಪಿಕೊಂಡಿದ್ದಕ್ಕೆ ಸೀತಾರಾಮನ್‌ಗೆ ಡಿಕೆ ಶಿವಕುಮಾರ್ ಧನ್ಯವಾದ

ರಾಜ್ಯಕ್ಕೆ 'ಅನ್ಯಾಯ' ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆಯಲ್ಲಿ ಆಗಿರುವ ವಿಳಂಬವನ್ನು ಒಪ್ಪಿಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ 'ಧನ್ಯವಾದ' ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯಕ್ಕೆ 'ಅನ್ಯಾಯ' ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆಯಲ್ಲಿ ಆಗಿರುವ ವಿಳಂಬವನ್ನು ಒಪ್ಪಿಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ 'ಧನ್ಯವಾದ' ಹೇಳಿದ್ದಾರೆ.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಾರ್ವತ್ರಿಕ ಚುನಾವಣೆ ಘೋಷಣೆಯಿಂದ ಕರ್ನಾಟಕಕ್ಕೆ ಬರ ಪರಿಹಾರ ಹಣ ವಿಳಂಬವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಬರ ಪರಿಹಾರ ವಿಳಂಬವಾಗಿದೆ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಚುನಾವಣೆಗೂ ಬರ ಪರಿಹಾರ ನೀಡುವುದಕ್ಕೂ ಏನು ಸಂಬಂಧ?' ಎಂದರು.

ಕರ್ನಾಟಕಕ್ಕೆ ಬರ ಪರಿಹಾರ ನೀಡಲು ವಿಳಂಬವಾಗಿದೆ ಮತ್ತು ಕೇಂದ್ರ ಸರ್ಕಾರವು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಾಗಿರುವುದರಿಂದ ಇದು ಉದ್ದೇಶಪೂರ್ವಕವಲ್ಲ ಎಂದು ಸೀತಾರಾಮನ್ ಶನಿವಾರ ಹೇಳಿದ್ದಾರೆಂದು ವರದಿಯಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್
ಚುನಾವಣಾ ಆಯೋಗ ಅನುಮತಿ ನೀಡದಿರುವುದು ಬರ ಪರಿಹಾರ ವಿಳಂಬಕ್ಕೆ ಕಾರಣ: ನಿರ್ಮಲಾ ಸೀತಾರಾಮನ್

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯದ ಬಗ್ಗೆ ಜನರಿಗೆ ಅರಿವಿದೆ. ನಾವು ನಾಲ್ಕು ತಿಂಗಳ ಹಿಂದೆಯೇ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ, ನಾವು ಮನವಿ ಮಾಡಿದ ನಾಲ್ಕು ತಿಂಗಳು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿಲ್ಲ. ಈಗ ಅವರು ನೀತಿ ಸಂಹಿತೆಯ ನೆಪ ನೀಡುತ್ತಿದ್ದಾರೆ. ಕೇಂದ್ರದ ಅನ್ಯಾಯದ ಬಗ್ಗೆ ಜನರಿಗೆ ತಿಳಿದಿದೆ. ಇದು ಡಿಕೆ ಸುರೇಶ್ ಅವರ 'ನಮ್ಮ ತೆರಿಗೆ ನಮ್ಮ ಹಕ್ಕು' ಅಭಿಯಾನವನ್ನು ಸಮರ್ಥಿಸುತ್ತದೆ. ಸತ್ಯ ಹೇಳಿದ್ದಕ್ಕೆ ನಿರ್ಮಲಾ ಅವರಿಗೆ ಧನ್ಯವಾದಗಳು ಎಂದು ಶಿವಕುಮಾರ್ ಹೇಳಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಚ್‌ಡಿ ಕುಮಾರಸ್ವಾಮಿ ಅವರು ಮಾಡಿದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಅಧಿಕಾರದಲ್ಲಿದ್ದಾಗ ಈ ವಿಚಾರವಾಗಿ ಏನನ್ನೂ ಮಾಡಲಿಲ್ಲ. ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಕಬಾಬ್ ತಿನ್ನಲು ಯಾತ್ರೆ ಕೈಗೊಂಡಿದ್ದೇವೆ ಎಂದು ವ್ಯಂಗ್ಯವಾಡಿದ್ದರು. ಪಾದಯಾತ್ರೆ ಕುರಿತು ಮಂಡ್ಯದ ಬಿಸಿ ತಟ್ಟುತ್ತಿರುವಂತೆ ತೋರುತ್ತಿದೆ ಎಂದ ಅವರು, ಮೇಕೆದಾಟು ಅಣೆಕಟ್ಟೆಯನ್ನು ಜನತೆಯ ಹಿತದೃಷ್ಟಿಯಿಂದ ತಲುಪಿಸುವ ಬದ್ಧತೆಯನ್ನು ಅವರು ಒತ್ತಿ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್
ಮೇಕೆದಾಟು ವಿವಾದ; ಅಧಿಕಾರದಲ್ಲಿದ್ದಾಗಲೇ ಏನೂ ಮಾಡಿಲ್ಲ ಎಂದ ಡಿಕೆ ಶಿವಕುಮಾರ್ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಕಿಡಿ

'ನಮ್ಮ ಹೋರಾಟ ಕ್ಷೇತ್ರದ ಜನರಿಗಾಗಿ, ಆದರೆ ಅವರಿಗೆ (ಕುಮಾರಸ್ವಾಮಿ) ಅದನ್ನು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಾನು ಮೇಕೆದಾಟು ಅಣೆಕಟ್ಟು ನಿರ್ಮಿಸಲು ನೀರಾವರಿ ಇಲಾಖೆಯನ್ನು ವಹಿಸಿಕೊಂಡಿದ್ದೇನೆ. ಅದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ. ನಾನು ಈ ಪ್ರದೇಶದ ಜನರಿಗೆ ನಿರಾಸೆ ಮಾಡುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com