ಚುನಾವಣೆ ಮುಗಿಯುವವರೆಗೆ ಬಿಡಿಎಯಿಂದ ಗುತ್ತಿಗೆದಾರಿಗೆ ಯಾವುದೇ ಪಾವತಿಗಳಾದಂತೆ ಕ್ರಮ ಕೈಗೊಳ್ಳಿ: ಆಯೋಗಕ್ಕೆ ಬಿಜೆಪಿ ಆಗ್ರಹ

ಲೋಕಸಭೆ ಚುನಾವಣೆ ಮುಗಿಯುವವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದಿಂದ ಗುತ್ತಿಗೆದಾರರಿಗೆ ಯಾವುದೇ ಪಾವತಿಗಳಾಗದಂತೆ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹಿಸಿದೆ.
ಬಿಜೆಪಿ
ಬಿಜೆಪಿ
Updated on

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುವವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದಿಂದ ಗುತ್ತಿಗೆದಾರರಿಗೆ ಯಾವುದೇ ಪಾವತಿಗಳಾಗದಂತೆ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹಿಸಿದೆ.

ಈ ಕುರಿತು ಚುನಾವಣಾ ಆಯೋಗಕ್ಕೆ ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಸುರೇಶ್ ಕುಮಾರ್ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿಗಾರರರೊಂದಿಗೆ ಮಾತನಾಡಿರುವ ಸುರೇಶ್ ಕುಮಾರ್ ಅವರು, ಬಿಡಿಎ ಮೂಲಕ ಚುನಾವಣೆಗೆ ಅಡ್ಡದಾರಿಯಿಂದ ಹಣ ಸಂಗ್ರಹಿಸುವ ಶಂಕೆಯಿದ್ದು, ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದೆ ಎಂದು ಹೇಳಿದರು.

ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಬಿಡಿಎ, ಶಿವರಾಮ ಕಾರಂತ ಬಡಾವಣೆಯಲ್ಲಿನ ಗುತ್ತಿಗೆದಾರರ ಪಾವತಿಗಾಗಿ 1 ಸಾವಿರ ಕೋಟಿಯಿಂದ 2 ಸಾವಿರ ಕೋಟಿ ಬೇಕಿದ್ದು, ಅದಕ್ಕಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲ ನಿವೇಶನಗಳನ್ನು ಬ್ಯಾಂಕಿಗೆ ಅಡಮಾನ ಇಟ್ಟು ಹಣ ಪಡೆಯಲು ಹೊರಟಿದ್ದಾರೆ. ನೀತಿ ಸಂಹಿತೆ ಇರುವಾಗ ಇಷ್ಟೊಂದು ಭಾರಿ ಮೊತ್ತ ಪಡೆಯುವುದು ಅನುಮಾನಾಸ್ಪದವಾಗಿದೆ. ಗುತ್ತಿಗೆದಾರರಿಗೆ ಈಗಲೇ ಹಣ ಕೊಡಬೇಕೇ? ಅದರ ಹಿಂದೆ ಏನಿದೆ ಎಂದು ಪ್ರಶ್ನಿಸಿದರು.

ಬಿಜೆಪಿ
ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯ; ಪ್ರಭಾವಿ ವ್ಯಕ್ತಿಗಳ ಪೋಸ್ಟ್ ಗಳ ಮೇಲೆ ಚುನಾವಣಾ ಆಯೋಗ ಕಣ್ಣು!

ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷವು ಮೂಲಸೌಕರ್ಯ ಕಾಮಗಾರಿಗಳನ್ನು ಮುಂದುವರೆಸಲು ಗುತ್ತಿಗೆದಾರರಿಗೆ ಪಾವತಿ ನೆಪ ಒಡ್ಡಿ, ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲು ಅಡ್ಡದಾರಿಗಳಿಂದ ಹಣದ ವ್ಯವಸ್ಥೆ ಮಾಡಿಕೊಳ್ಳುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಲೋಕಸಭಾ ಚುನಾವಣೆ ಮುಗಿಯುವವರೆಗೆ ಬಿಡಿಎದಿಂದ ಯಾವುದೇ ರೀತಿಯ ಪಾವತಿಗಳು ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ನೀತಿ ಸಂಹಿತೆ ಮುಗಿಯುವವರೆಗೆ ಇಂಥ ದುಸ್ಸಾಹಸಕ್ಕೆ ಅವಕಾಶ ಕೊಡಬಾರದೆಂದು ಕೋರಿದ್ದೇವೆ ಎಂದರು.

ಏ.26ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದ ಮೊದಲನೇ ಹಂತದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಕಡೆಯಿಂದ ಪ್ರತಿ ಅಭ್ಯರ್ಥಿಯ ಒಟ್ಟು ಕ್ರಿಮಿನಲ್ ಕೇಸ್ ಎಂಬ ಮಾಹಿತಿ ಇದೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಅಭ್ಯರ್ಥಿಗಳ ವಿರುದ್ಧ 18, ಬಿಜೆಪಿ ವಿರುದ್ಧ 10 ಮತ್ತು ಜೆಡಿಎಸ್ ವಿರುದ್ಧ 5 ಕೇಸುಗಳಿವೆ ಎಂದು ವಿವರಿಸಿದರು.

ಇದೇ ವೇಳೆ ಅವರು ಕಾನೂನು ವಿಭಾಗದ ಕೈಪಿಡಿಯನ್ನೂ ಬಿಡುಗಡೆ ಮಾಡಿದರು. ಕೈಪಿಡಿಯಲ್ಲಿ ಬರುವ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಚುನಾವಣಾ ನಿಯಮಗಳ ಬಗ್ಗೆ ಮತ್ತು ಚುನಾವಣಾ ಸಂಬಂಧಿತ ಕಾನೂನುಗಳನ್ನು ತಿಳಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದರಲ್ಲಿ ಅಭಿಪ್ರಾಯ ಬರೆದಿದ್ದಾರೆ. ವಿಶ್ವದ ಅತ್ಯಂತ ದೊಡ್ಡ ಪಕ್ಷವಾದ ಬಿಜೆಪಿ ಕಾನೂನಿಗೆ ಅನುಗುಣವಾಗಿ ಸ್ಪರ್ಧೆ ಮಾಡಲಿದೆ. ಅದಕ್ಕಾಗಿ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕೈಪಿಡಿ ಹೊರತರಲಾಗಿದೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com