ಹನುಮಾನ್ ಚಾಲೀಸಾ ವಿವಾದ: ಕರ್ನಾಟಕವನ್ನು ಪಾಕಿಸ್ತಾನಕ್ಕಿಂತಲೂ ಕಡೆ ಮಾಡುತ್ತಿದ್ದಾರೆ; ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

ನಗರತ್ ಪೇಟೆಯ ಮೊಬೈಲ್‌ ಅಂಗಡಿಯೊಂದರಲ್ಲಿ ಇತ್ತೀಚೆಗೆ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಹಲ್ಲೆಗೊಳಗಾದ ವ್ಯಕ್ತಿಯ ಮೇಲೆಯೇ ದೂರು ದಾಖಲಾಗಿರುವುದನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಭಾನುವಾರ ಕಟುವಾಗಿ ಖಂಡಿಸಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ನಗರತ್ ಪೇಟೆಯ ಮೊಬೈಲ್‌ ಅಂಗಡಿಯೊಂದರಲ್ಲಿ ಇತ್ತೀಚೆಗೆ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಹಲ್ಲೆಗೊಳಗಾದ ವ್ಯಕ್ತಿಯ ಮೇಲೆಯೇ ದೂರು ದಾಖಲಾಗಿರುವುದನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಭಾನುವಾರ ಕಟುವಾಗಿ ಖಂಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಹನುಮಾನ್ ಚಾಲೀಸಾ ಆಡಿಯೊ ಹಾಕಿದ್ದವರ ಮೇಲೆ ಎಫ್‌ಐಆರ್‌ ಹಾಕಿರುವುದು ಎಷ್ಟು ಸರಿ? ಇವರೇನು ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಪ್ರಹ್ಲಾದ್ ಜೋಶಿ
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ: ಪೊಲೀಸರ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತಲೂ ಕಡೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಹಲ್ಲೆಗೊಳಗಾದ ಅಂಗಡಿಯಾತನ ಮೇಲೆ ಹಾಕಲಾಗಿರುವ ಎಫ್‌ಐಆರ್‌ ಅನ್ನು ರಾಜ್ಯ ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.

ಹನುಮಾನ್ ಚಾಲೀಸಾ ಪಠಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೇ ಹಿಂದೂ ವಿರೋಧಿ ನಡೆ ತೋರಿದೆ ಎಂದು ಹರಿಹಾಯ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com