ಯಕ್ಷಗಾನ ವೇಷ ಧರಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು

ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಯಲ್ ನೇತೃತ್ವದ ಉಡುಪಿ ಜಿಲ್ಲಾ SVEEP(ಸ್ವೀಪ್) ಸಮಿತಿಯು ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿಶಿಷ್ಟ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಯಕ್ಷಗಾನ ಕಲಾವಿದರ ವೇಷಭೂಷಣ ತೊಟ್ಟ ಅಧಿಕಾರಿಗಳು
ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಯಕ್ಷಗಾನ ಕಲಾವಿದರ ವೇಷಭೂಷಣ ತೊಟ್ಟ ಅಧಿಕಾರಿಗಳು

ಉಡುಪಿ: ಏಪ್ರಿಲ್ 26 ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತು ಮೇ 7 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ(ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ) ಮತದಾನ ಪ್ರಮಾಣ ಹೆಚ್ಚಿಸಲು ಉಡುಪಿ ಜಿಲ್ಲೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳು ಜೋರಾಗಿ ನಡೆಯುತ್ತಿವೆ.

ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಯಲ್ ನೇತೃತ್ವದ ಉಡುಪಿ ಜಿಲ್ಲಾ SVEEP(ಸ್ವೀಪ್) ಸಮಿತಿಯು ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿಶಿಷ್ಟ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ ಯಕ್ಷಗಾನದ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದಾರೆ.

ಪ್ರತೀಕ್ ಬಯಲ್, ಕುಂದಾಪುರ ಎಸಿ ರಶ್ಮಿ, ಉಡುಪಿ ಎಡಿಸಿ ಮಮತಾದೇವಿ ಜಿ ಎಸ್ ಮತ್ತು ಕರಾವಳಿ ಭದ್ರತಾ ಪೊಲೀಸ್(CSP) ವರಿಷ್ಠಾಧಿಕಾರಿ ಮಿಥುನ್ ಎಚ್ ಎನ್ ಅವರು ಯಕ್ಷಗಾನ ಕಲಾವಿದರ ವೇಷಭೂಷಣವನ್ನು ಧರಿಸಿ ಜಿಲ್ಲೆಯ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಶೇ.100 ಮತದಾನಕ್ಕೆ‌, ಮತದಾನದ ಮಹತ್ವವನ್ನು ಸಾರಿ ಎಲ್ಲರೂ‌ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡುವಂತೆ ಕರೆ ನೀಡಿದರು.

ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಯಕ್ಷಗಾನ ಕಲಾವಿದರ ವೇಷಭೂಷಣ ತೊಟ್ಟ ಅಧಿಕಾರಿಗಳು
ಲೋಕಸಭಾ ಚುನಾವಣೆ 2024: ಮೂಲ ಸೌಕರ್ಯ ಕೊರತೆ ಆರೋಪ; ಉಡುಪಿ, ಹಾಸನ ಜಿಲ್ಲಾ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ!

ಐಎಎಸ್, ಐಪಿಎಸ್ ಮತ್ತು ಕೆಎಎಸ್ ಅಧಿಕಾರಿಗಳು ಸುಮಾರು ಐದು ಗಂಟೆಗಳ ಕಾಲ ಯಕ್ಷಗಾನ ವೇಷಭೂಷಣವನ್ನು ಧರಿಸಿ ಖುಷಿ ಪಟ್ಟರು. ಏಕೆಂದರೆ ಈ ಎಲ್ಲಾ ಅಧಿಕಾರಿಗಳು ಮೊದಲ ಬಾರಿಗೆ ಯಕ್ಷಗಾನ ವೇಷಭೂಷಣವನ್ನು ಧರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com