ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ವೆಬ್​​ಸೈಟ್​ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶವನ್ನು karresults.nic.in ಅಥವಾ pue.kar.nic ಅಧಿಕೃತ ವೆಬ್​ಸೈಟ್ ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು.

ಸಾಂದರ್ಭಿಕ ಚಿತ್ರ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಂಡಳಿ ಸ್ಪಷ್ಟನೆ

2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಲ್ಲಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com