2nd PUC results: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಶೇ.81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ (Second PU Result) ಪ್ರಕಟಗೊಂಡಿದೆ.
2nd PUC results: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಶೇ.81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
Updated on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಬುಧವಾರ ದ್ವಿತೀಯ ಪಿಯುಸಿ(Second PUC results) ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈ ಬಾರಿ ಕೂಡ ಬಾಲಕಿಯರೇ ಬಾಲಕರಿಗಿಂತ ಮುಂದಿದ್ದು, ಒಟ್ಟಾರೆ ಉತ್ತೀರ್ಣ ಶೇಕಡಾ 81.15 ರಷ್ಟು ಬಂದಿದೆ. ಕಳೆದ ವರ್ಷಕ್ಕಿಂತ ತೇರ್ಗಡೆ ಫಲಿತಾಂಶ ಶೇ.7.89ರಷ್ಟು ಹೆಚ್ಚಳವಾಗಿದೆ.

ಮಾರ್ಚ್ 1 ರಿಂದ 22 ರವರೆಗೆ ರಾಜ್ಯಾದ್ಯಂತ 1,124 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಯಿತು. ಪರೀಕ್ಷೆಗೆ ಹಾಜರಾಗಿದ್ದ 3,59,612 ಬಾಲಕಿಯರ ಪೈಕಿ 3,05,212 ಮಂದಿ ಉತ್ತೀರ್ಣರಾಗಿದ್ದು, ಶೇ.84.87 ಫಲಿತಾಂಶ ಬಂದಿದೆ. 3,21,467 ಬಾಲಕರಲ್ಲಿ 2,47,478 ಮಂದಿ ಉತ್ತೀರ್ಣರಾಗಿದ್ದು, ಶೇ.76.98 ಫಲಿತಾಂಶ ಬಂದಿದೆ.

KSEAB ಪ್ರಕಾರ, 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಒಟ್ಟಾರೆಯಾಗಿ, 1,53,370 ವಿದ್ಯಾರ್ಥಿಗಳು ಶೇಕಡಾ 85 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ.

ಶೇಕಡಾ 42ರಷ್ಟು ಪುನರಾವರ್ತಿತ ವಿದ್ಯಾರ್ಥಿಗಳು ಉತ್ತೀರ್ಣ: ಕಳೆದ ವರ್ಷದ ಒಟ್ಟಾರೆ ಉತ್ತೀರ್ಣ ಶೇಕಡಾ 74.67 ಕ್ಕೆ ಹೋಲಿಸಿದರೆ, ಈ ವರ್ಷ ಶೇಕಡಾ 6.48 ರಷ್ಟು ಹೆಚ್ಚಳವಾಗಿದೆ. ವಿಜ್ಞಾನ ವಿಭಾಗದಲ್ಲಿ 89.96 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ನಂತರ ವಾಣಿಜ್ಯ 80.94 ಮತ್ತು ಕಲಾ 68.36. 2023 ರಲ್ಲಿ ಪರೀಕ್ಷೆಗೆ ನೋಂದಾಯಿಸಿದ್ದ 7,27,923 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

36,007 ಪುನರಾವರ್ತಿತರಲ್ಲಿ, ಕೇವಲ 41.98ರಷ್ಟು (15,116 ವಿದ್ಯಾರ್ಥಿಗಳು) ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದು ಮತ್ತು 22,253 ಖಾಸಗಿ ಅಭ್ಯರ್ಥಿಗಳಲ್ಲಿ ಶೇಕಡಾ 48.16ರಷ್ಟು (10,716 ವಿದ್ಯಾರ್ಥಿಗಳು) ಉತ್ತೀರ್ಣರಾಗಿದ್ದಾರೆ.

ಏಪ್ರಿಲ್ 14ರಿಂದ 19ರವರೆಗೆ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಿ: ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಏಪ್ರಿಲ್ 16 ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಏಪ್ರಿಲ್ 14 ಮತ್ತು 19 ರ ನಡುವೆ ಡೌನ್‌ಲೋಡ್ ಮಾಡಬಹುದು. ಮರುಮೌಲ್ಯಮಾಪನ ಮತ್ತು ಅಂಕಗಳ ಮರು ಎಣಿಕೆಗೆ ಅರ್ಜಿಗಳನ್ನು ಸಲ್ಲಿಸಲು ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ ಅವಕಾಶವಿರುತ್ತದೆ. ಮರುಮೌಲ್ಯಮಾಪನ ಅರ್ಜಿಯನ್ನು ಏಪ್ರಿಲ್ 14 ರಿಂದ 20 ರವರೆಗೆ ಸಲ್ಲಿಸಬಹುದು. ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಪ್ರತಿ ವಿಷಯಕ್ಕೆ 530 ರೂ ಮತ್ತು ಮರುಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂಪಾಯಿಯನ್ನು ಮಂಡಳಿ ನಿಗದಿಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com