ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಬರ ಪರಿಹಾರ ವಿವಾದ: ಸರ್ವೋಚ್ಚ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದೆ ಕೇಂದ್ರ ಸರ್ಕಾರ; ಸಿಎಂ ಸಿದ್ದರಾಮಯ್ಯ ಆರೋಪ

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ. ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com