ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿ: ಮಹಿಳೆಗೆ ಡಿಕೆ ಶಿವಕುಮಾರ್ ಮೆಚ್ಚುಗೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಪ್ರತೀ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ ಖರೀದಿ ಮಾಡಿದ್ದು, ಮಹಿಳೆಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಪ್ರತೀ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ ಖರೀದಿ ಮಾಡಿದ್ದು, ಮಹಿಳೆಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್
ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಮೀಸಲು: ಮಹಿಳಾ ಮತ್ತು ಮಕ್ಕಳ ಕ್ಷೇತ್ರಕ್ಕೆ ಬಜೆಟ್'ನಲ್ಲಿ ಭರ್ಜರಿ ಕೊಡುಗೆ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಲತಾ ಎಂಬ ಗೃಹಿಣಿ ಪ್ರತಿ ತಿಂಗಳು ಬಂದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಡ್ಜ್ ಖರೀದಿ ಮಾಡಿದ್ದಾರೆ. 17,500 ರೂಪಾಯಿ ಕೊಟ್ಟು ಫ್ರಿಡ್ಜ್ ಖರೀದಿಸಿದ್ದಾರೆ. ಹಬ್ಬದಂದು ಮನೆಗೆ ಬಂದ ಫ್ರಿಡ್ಜ್​ಗೆ ಲತಾ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಸಹ ಒಂದಾಗಿದೆ. ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ರಾಜ್ಯದ ಮನೆ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com