ಅಪಾಯಕಾರಿ ಶ್ವಾನ ಸಾಕಾಣಿಕೆ ನಿಷೇಧ ಕಾನೂನಿಗೆ ವಿರುದ್ಧ: ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮನುಷ್ಯರ ಜೀವಕ್ಕೆ ಅಪಾಯಕಾರಿ ಎನ್ನಲಾಗಿರುವ 23ಕ್ಕೂ ಹೆಚ್ಚು ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಾಣಿಕೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.

ಮನುಷ್ಯರ ಜೀವಕ್ಕೆ ಅಪಾಯಕಾರಿ ಎನ್ನಲಾಗಿರುವ 23ಕ್ಕೂ ಹೆಚ್ಚು ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು.

ಈ ಸುತ್ತೋಲೆಯು ಕಾನೂನಿಗೆ ವಿರುದ್ಧವಾಗಿದೆ ಹಾಗಾಗಿ ಅದನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಲ್ಲದೆ ಈ ಕ್ರಮಕ್ಕೆ ಮುನ್ನ ಶ್ವಾನ ತಳಿ ಸಂವರ್ಧನಾ‌ ಸಂಘಟನೆಯೊಂದಿಗೆ ಸಮಾಲೋಚಿಸಬೇಕು. ಸರ್ಕಾರ ಶ್ವಾನ ತಳಿ‌ ನಿಷೇಧಿಸುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು ಎಂದು ಹೇಳಿದೆ.

ಸಾಂದರ್ಭಿಕ ಚಿತ್ರ
ಅಪಾಯಕಾರಿ ಶ್ವಾನ ತಳಿ ಸಂತಾನೋತ್ಪತ್ತಿ ನಿಷೇಧಿಸಿದ ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ

ಕೇಂದ್ರದ ಸುತ್ತೋಲೆಯನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿಗಳಾದ ಕಿಂಗ್ ಸೊಲೊಮನ್ ಡೇವಿಡ್ ಮತ್ತು ಮರಡೋನಾ ಜೋನ್ಸ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ, ಕೇಂದ್ರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಏಪ್ರಿಲ್ 6ರಂದು ಇದೇ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿತ್ತು. ಇಂದು ಕೇಂದ್ರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

ಸುತ್ತೋಲೆ ಮೂಲಕ ಕೇಂದ್ರ ನಿಷೇಧಿಸಿದ್ದ ಶ್ವಾನಗಳ ಪಟ್ಟಿ ಹೀಗಿದೆ

ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೋಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್ ಡಾಗ್, ಟೋರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ, ಅಕಿಟಾಟ್, ಮಾ ಟೆರಿಯರ್‌ಗಳು, ರೊಡೇಸಿಯನ್ ರಿಡ್ಜ್‌ಬ್ಯಾಕ್, ವುಲ್ಫ್ ಡಾಗ್ಸ್, ಕೆನಾರಿಯೊ, ಅಕ್ಬಾಶ್ ಡಾಗ್, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com