5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ 'ಸುಪ್ರೀಂ' ತಡೆಯಾಜ್ಞೆ: ಕಾನೂನು ಅಭಿಪ್ರಾಯ ಪಡೆಯಲು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ

5, 8 ಮತ್ತು 9ನೇ ತರಗತಿಗಳಿಗೆ ನಡೆಸಲಾದ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್‌ನ ಮಧ್ಯಂತರ ತಡೆಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ನಿರ್ಧರಿಸಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 5, 8 ಮತ್ತು 9ನೇ ತರಗತಿಗಳಿಗೆ ನಡೆಸಲಾದ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್‌ನ ಮಧ್ಯಂತರ ತಡೆಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ನಿರ್ಧರಿಸಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

ಆದರೆ ಸುಪ್ರೀಂ ಕೋರ್ಟ್ ತೀರ್ಪು ಬರುವ ಹೊತ್ತಿಗೆ ಶಾಲೆಗಳು ಪರೀಕ್ಷೆ ಫಲಿತಾಂಶ ಪ್ರಕಟಿಸಿಯಾಗಿತ್ತು. ಶಿಕ್ಷಣ ಇಲಾಖೆಯ ನಿರ್ದೇಶನ ಪ್ರಕಾರ, ಬೆಳಗ್ಗೆ 9 ಗಂಟೆಗೆ ಶಾಲೆಗಳು ಫಲಿತಾಂಶ ಪ್ರಕಟಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪು ಬಂದಿದ್ದು ಬೆಳಗ್ಗೆ 11 ಗಂಟೆಯ ವೇಳೆಗೆ.

ಸಾಂದರ್ಭಿಕ ಚಿತ್ರ
5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಮುಂದಿನ ಕ್ರಮ ಕೈಗೊಳ್ಳಲು ನಾವು ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆಯುತ್ತೇವೆ ಎಂದರು. ಈಗಾಗಲೇ ಶಾಲೆಗಳು ಬೇಸಿಗೆ ರಜೆ ನಿಮಿತ್ತ ಮುಚ್ಚಿವೆ. ಶಾಲೆಗಳಲ್ಲಿ ಕಳೆದ ಸೋಮವಾರ ಫಲಿತಾಂಶ ಪ್ರಕಟವಾಗಿದ್ದು, ತೀರ್ಪು ಬರುವ ಕೆಲವು ಗಂಟೆಗಳ ಮೊದಲು ಫಲಿತಾಂಶ ಪ್ರಕಟವಾಗಿದೆ. ಮತ್ತೆ ಶಾಲೆಯನ್ನು ಮರುತೆರೆಯಲು ಸಾಧ್ಯವಿಲ್ಲ. ಕಾನೂನು ಅಭಿಪ್ರಾಯಕ್ಕೆ ನಾವು ಕಾಯುತ್ತೇವೆ ಎಂದರು.

ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನ ತೀರ್ಪಿಗೆ ತಡೆಯಾಜ್ಞೆ ನೀಡಿದ ನಂತರ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲೆಗಳು ಮತ್ತೆ ಗೊಂದಲಕ್ಕೀಡಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com