ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ವಿಜಯಪುರದಲ್ಲಿ ಸಿಡಿಲು ಬಡಿದು 16 ವರ್ಷದ ಬಾಲಕ ಸಾವು

ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯಪುರ: ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಮೃತ ಬಾಲಕನನ್ನು ಬೀರಪ್ಪ ನಿಂಗಪ್ಪ ಅವರಾದಿ(16) ಎಂದು ಗುರುತಿಸಲಾಗಿದೆ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇಂದು ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಸಾಂದರ್ಭಿಕ ಚಿತ್ರ
Skymet prediction: ಈ ವರ್ಷ ಭಾರತದಲ್ಲಿ ಸಾಮಾನ್ಯ ಮುಂಗಾರು: ಕರ್ನಾಟಕದಲ್ಲಿ ವ್ಯಾಪಕ ಮಳೆ ನಿರೀಕ್ಷೆ!

ಕಳೆದೊಂದು ವಾರದಿಂದ ನಿಗಿನಿಗಿ ಕೆಂಡವಾಗಿದ್ದ ಕಲಬುರಗಿರಯಲ್ಲಿ ಇಂದು ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಅಫಜಲಪುರ ತಾಲೂಕಿನ ಹಲವೆಡೆ ಗುಡುಗು, ಮಿಂಚು ಸಹಿತ ಧಾರಕಾರ‌ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಲಬುರಗಿ ನಗರದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಇಳಕಲ್, ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ ಹಾಗೂ ಸುತ್ತಲಿನ ಪ್ರಾಂತ್ಯಗಳು, ಚಿಕ್ಕಮಗಳೂರು ಜಿಲ್ಲೆಯ ಕಳಸ, ಶೃಂಗೇರಿ ಹಾಗೂ ಬಾಳೆಹೊನ್ನೂರು ವಲಯಗಳಲ್ಲಿ ಜೋರಾಗಿ ಮಳೆ ಸುರಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com