ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಯೋಜನೆ; ವಿಡಿಯೋ ಹಂಚಿಕೊಂಡು ರಾಹುಲ್ ಗಾಂಧಿ ಮೆಚ್ಚುಗೆ!

ಗೃಹಲಕ್ಷ್ಮಿ ಯೋಜನೆಯ ಹಣವು ವಿದ್ಯಾಭ್ಯಾಸಕ್ಕೆ ನೆರವಾಯಿತು ಎಂದಿದ್ದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವೇದಾಂತ್ ನಾವಿ ಅವರ ಹೇಳಿಕೆಯ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣವು ವಿದ್ಯಾಭ್ಯಾಸಕ್ಕೆ ನೆರವಾಯಿತು ಎಂದಿದ್ದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವೇದಾಂತ್ ನಾವಿ ಅವರ ಹೇಳಿಕೆಯ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕಿರು ವಿಡಿಯೋ ಹಂಚಿಕೊಂಡಿರುವ ಕರ್ನಾಟಕ ಕಾಂಗ್ರೆಸ್, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ವಿವಿಧ ರೀತಿಯಲ್ಲಿ ಆಸರೆಯಾಗಿರುವುದನ್ನು ಕಂಡು ಸಾರ್ಥಕ ಭಾವ ಮೂಡುತ್ತಿದೆ. ಕೇವಲ ಹತ್ತು ತಿಂಗಳಲ್ಲಿ ನಮ್ಮ ಯೋಜನೆಯಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಪರಿಣಾಮಕಾರಿ ಬದಲಾವಣೆ ತರುತ್ತಿರುವುದು ಹೆಮ್ಮೆಯ ಸಂಗತಿ ಎಂದಿದೆ.

ತಂದೆಯನ್ನು ಕಳೆದುಕೊಂಡ ದ್ವಿತೀಯ ಪಿಯುಸಿಯ ಕಲಾ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವೇದಾಂತ್ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಶಿಕ್ಷಣ ಪಡೆಯಲು ನೆರವಾಗಿರುವುದು ಯೋಜನೆಯ ಸಾರ್ಥಕತೆಗೆ ಸಾಕ್ಷಿ. ಇಂತಹ ಅದೆಷ್ಟೋ ಜನರ ಬದುಕಲ್ಲಿ ಬದಲಾವಣೆಯನ್ನು ತಂದಿವೆ ನಮ್ಮ ಗ್ಯಾರಂಟಿ ಯೋಜನೆಗಳು. ಕಾಂಗ್ರೆಸ್ ಜನರ ಬದುಕನ್ನು ಕಟ್ಟಿಕೊಡುವ ಮೂಲಕ ದೇಶವನ್ನು ಕಟ್ಟಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಸಿದ್ದರಾಮಯ್ಯ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, 'ಇಂತಹ 'ಯಶಸ್ಸಿನ ಕಥೆಗಳು' ನನ್ನನ್ನು ನಂಬುವಂತೆ ಮಾಡುತ್ತವೆ ಮತ್ತು ಮಹಿಳೆಯರ ಖಾತೆಗೆ ಪ್ರತಿ ವರ್ಷ 1 ಲಕ್ಷ ರೂ. ಜಮೆ ಮಾಡುವ ನಮ್ಮ 'ಮಹಾಲಕ್ಷ್ಮಿ' ಗ್ಯಾರಂಟಿಯು ದೇಶದ ಭವಿಷ್ಯವನ್ನು ರೂಪಿಸುವ ಕ್ರಾಂತಿಕಾರಿ ಹೆಜ್ಜೆ ಎಂದು ಸಾಬೀತುಪಡಿಸುತ್ತದೆ' ಎಂದಿದ್ದಾರೆ.

ಮುಂದುವರಿದು, 'ಕರ್ನಾಟಕದಲ್ಲಿ ಕಾಂಗ್ರೆಸ್‌ನ ಗೃಹಲಕ್ಷ್ಮಿ ಯೋಜನೆ ಜಾರಿಯಲ್ಲಿದೆ. ಈ ಯೋಜನೆ ಅಡಿಯಲ್ಲಿ 1 ಕೋಟಿಗೂ ಹೆಚ್ಚು ಮಹಿಳೆಯರು ಪ್ರತಿ ತಿಂಗಳು 2,000 ರೂ.ಗಳನ್ನು ಪಡೆಯುತ್ತಿದ್ದಾರೆ. ಅದೇ ಹಣದಲ್ಲಿ ತಾಯಿಯೊಬ್ಬರು ತನ್ನ ಮಗ ವೇದಾಂತ್ ವಿದ್ಯಾಭ್ಯಾಸಕ್ಕೆ ನೆರವಾದರು ಮತ್ತು ಆತ ಪಿಯುಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ' ಎಂದು ಹೇಳಿದರು.

'ವೇದಾಂತ್ ಅವರ ಕಥೆಯು ಭಾರತೀಯ ಮಹಿಳೆಯರ ತಪಸ್ಸು ಮತ್ತು ಪ್ರತಿ ಪೈಸೆಯಿಂದ ಮನೆಯನ್ನು ಬಲಪಡಿಸುವ ಇಚ್ಛಾಶಕ್ತಿಗೆ ಜೀವಂತ ಉದಾಹರಣೆಯಾಗಿದೆ. ‘ಮಹಾಲಕ್ಷ್ಮಿ ಯೋಜನೆ’ ಮೂಲಕ ದೇಶದಾದ್ಯಂತ ಇರುವ ಬಡ ಕುಟುಂಬಗಳ ಮಹಿಳೆಯರು ಪ್ರತಿ ವರ್ಷ 1 ಲಕ್ಷ ರೂ.ಗಳನ್ನು ಪಡೆಯುತ್ತಾರೆ ಎಂಬುದನ್ನು ಊಹಿಸಿದರೆ, ಅದೆಷ್ಟು ವೇದಾಂತಗಳು ತಮ್ಮ ಪ್ರತಿಭೆಯಿಂದ ಕುಟುಂಬದ ಭವಿಷ್ಯವನ್ನು ಬದಲಾಯಿಸುತ್ತಾರೆ? ಕಾಂಗ್ರೆಸ್‌ನ ಈ ಐತಿಹಾಸಿಕ ಯೋಜನೆಯು ಬಡ ಕುಟುಂಬಗಳ ಕನಸುಗಳನ್ನು ನನಸಾಗಿಸುತ್ತದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ
2nd PUC results: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಶೇ.81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ವೇದಾಂತ್ ನಾವಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ಅವರು ಎರಡನೇ ಟಾಪರ್ ಆಗಿದ್ದಾರೆ.

'ನನ್ನ ತಂದೆ ಇಲ್ಲ. ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿದ್ದರಿಂದ ನನ್ನ ತಾಯಿ ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಂಕಷ್ಟದ ಸಮಯದಲ್ಲಿ, ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣ ನನ್ನ ಅಧ್ಯಯನ ಮತ್ತು ಹಾಸ್ಟೆಲ್ ವಾಸ್ತವ್ಯ ಮತ್ತು ಇತರ ಖರ್ಚುಗಳಿಗೆ ಸಹಾಯ ಮಾಡಿತು' ಎಂದು ವೇದಾಂತ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com