ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಹಾಗೂ ಉಗ್ರ ಮತೀನ್ ಸಿಕ್ಕಿದ್ದೇಗೆ?: ಇಲ್ಲಿದೆ ರೋಚಕ ಮಾಹಿತಿ!

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಾದ ಮುಸಾವೀರ್ ಹುಸೇನ್ ಉಗ್ರ ಅಬ್ದುಲ್ ಮತೀನ್‌ ಎಂಬುವರು ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸತತ ಪ್ರಯತ್ನಗಳನ್ನು ನಡೆಸುತ್ತಿದ್ದ NIA ಕೊನೆಗೂ ಆರೋಪಿಗಳನ್ನು ಕೋಡ್‌ವರ್ಡ್‌ ಸಹಾಯದಿಂದ ಬಂಧಿಸಿದೆ.
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಾದ ಮುಸಾವೀರ್ ಹುಸೇನ್ ಉಗ್ರ ಅಬ್ದುಲ್ ಮತೀನ್‌ ಎಂಬುವರು ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸತತ ಪ್ರಯತ್ನಗಳನ್ನು ನಡೆಸುತ್ತಿದ್ದ NIA ಕೊನೆಗೂ ಆರೋಪಿಗಳನ್ನು ಕೋಡ್‌ವರ್ಡ್‌ ಸಹಾಯದಿಂದ ಬಂಧಿಸಿದೆ.

ಬಾಂಬ್ ಸ್ಫೋಟ ನಡೆಸಿ ಪರಾರಿಯಾಗಿದ್ದ ಮುಸಾವೀರ್ ಹಾಗೂ ಅಬ್ದುಲ್ ಮತೀನ್ ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದರು. ಈ ಮಾಹಿತಿ ಸಿಗುತ್ತಿದ್ದಂತೆ ಅಲರ್ಟ್ ಆದ ಎನ್ಐಎ ಅಧಿಕಾರಿಗಳು ಆರೋಪಿಗಳ ಹೆಡೆಮೂರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ತನಿಖೆ ವಹಿಸಿಕೊಂಡ ಎನ್ಐಎ ಮೊದಲಿಗೆ ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಮಾಝ್‌ ಮುನೀರ್‌ನನ್ನು ಕಸ್ಟಡಿಗೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಿತ್ತು. ನಂತರ ಮುನೀರ್ ಸೆಲ್ ಮೇಲೆ ದಾಳಿ ಮಾಡಿತ್ತು. ಆಗ ಅಲ್ಲಿ ಒಂದು ಮೆಮೋರಿ ಕಾರ್ಡ್ ಪತ್ತೆಯಾಗಿತ್ತು. ಈ ಮೆಮೋರಿ ಕಾರ್ಡ್‌ ಪರಿಶೀಲಿಸಿದಾಗ ಹಲವು ಕೋಡ್‌ ವರ್ಡ್‌ ಸಿಕ್ಕಿತ್ತು. ಈ ಕೋಡ್‌ ವರ್ಡ್‌ ಡಿಕೋಡ್‌ ಮಾಡಿದಾಗ ಆರೋಪಿಗಳ ಕುರಿತು ಮಾಹಿತಿ ಸಿಕ್ಕಿತು ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಗಳು
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಕೊನೆಗೂ ಸಿಕ್ಕಿಬಿದ್ದ ಖಾನ್‌ಗ್ರೆಸ್ ಬ್ರದರ್ಸ್!

ಬಂಧಿತ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಇಂದು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.

ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ರಾಷ್ಟ್ರೀಯ ತನಿಖಾ ಸಂಸ್ಥೆಯ ಮನವಿ ಮೇರೆಗೆ ಸಿಟಿ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ಗೆ ಅನುಮತಿ ನೀಡಿದ್ದಾರೆ. ಕೋರ್ಟ್ ನಿಂದ ವಶಕ್ಕೆ ಪಡೆದು ಆರೋಪಿಗಳನ್ನು ಎನ್​​ಐಎ ತಂಡ ಬೆಂಗಳೂರಿಗೆ ಕರೆತರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com