ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ​​​ ಆರೋಪಿಗಳು ಬೆಂಗಳೂರಿಗೆ: ನ್ಯಾಯಾಧೀಶರ ಮುಂದೆ ಹಾಜರು, ನಕಲಿ ಆಧಾರ್ ಕಾರ್ಡು ಬಳಕೆ ಪತ್ತೆ

ಎನ್ ಐಎ ಅಧಿಕಾರಿಗಳು ಮತ್ತು ರಾಜ್ಯ ಪೊಲೀಸರಿಗೆ ಧನ್ಯವಾದ ಹೇಳಿದ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್
ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಕರೆತರುತ್ತಿರುವುದು
ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಕರೆತರುತ್ತಿರುವುದು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್​ ಸ್ಫೋಟ (Bengaluru Rameshwaram Cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ(NIA) ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ನಿನ್ನೆ ಶುಕ್ರವಾರ ಕೋಲ್ಕತ್ತಾದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ (mussavir shazeeb hussain) ಹಾಗೂ ಬಾಂಬ್‌ ಇಡುವ ಯೋಜನೆ ರೂಪಿಸಿದ್ದ ಪ್ರಧಾನ ಸೂತ್ರಧಾರಿ ಅಬ್ದುಲ್‌ ಮತೀನ್‌ ತಾಹಾನನ್ನು (Abdul Mateen Taha) ರಾಷ್ಟ್ರೀಯ ತನಿಖಾ ದಳ ಕೋಲ್ಕತ್ತಾದಲ್ಲಿ ಬಂಧಿಸುವಲ್ಲಿ ತಂಡ ಯಶಸ್ವಿಯಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಮತೀನ್, ತುಂಗಾತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ. ಉಗ್ರ ಶಾರಿಕ್‌ಗೆ ಕುಕ್ಕರ್‌ ಕೊಟ್ಟು ಮಂಗಳೂರಿನಲ್ಲೂ ಸ್ಫೋಟ ಮಾಡಿಸಿದ್ದ. ಅದೇ ರೀತಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಡಲು ಮತೀನ್ ಮಸಲತ್ತು ಮಾಡಿದ್ದ ಎನ್ನುವುದು ಎನ್​ಐಎ ತನಿಖೆಯಿಂದ ಹೊರಬಿದ್ದಿದೆ.

ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಕರೆತರುತ್ತಿರುವುದು
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಹಾಗೂ ಉಗ್ರ ಮತೀನ್ ಸಿಕ್ಕಿದ್ದೇಗೆ?: ಇಲ್ಲಿದೆ ರೋಚಕ ಮಾಹಿತಿ!

ಮತೀನ್ ನೀಡಿದ ಸೂಚನೆಯಂತೆ ಬಾಂಬ್ ಇಟ್ಟು ಎಸ್ಕೇಪ್ ಆಗಿದ್ದ ಬಾಂಬರ್ ಮುಸಾವಿರ್, ಸೀದಾ ಪಶ್ಚಿಮ ಬಂಗಾಳಕ್ಕೆ ಹೋಗಿದ್ದ. ಈತನಿಗಾಗಿ ಎನ್‌ಐಎ ಅಧಿಕಾರಿಗಳು, ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ಹಲವು ರಾಜ್ಯದಲ್ಲಿ ಶೋಧ ನಡೆಸಿದ್ರು. ಇಬ್ಬರು ಉಗ್ರರು ಪಶ್ಚಿಮ ಬಂಗಾಳದಲ್ಲಿ ಇದ್ದಾರೆಂಬ ಮಾಹಿತಿ ಗೊತ್ತಾಗುತ್ತಿದ್ದಂತೆ ಅಲರ್ಟ್ ಆದ ಎನ್ಐಎ ಉಗ್ರರಾದ ಮುಸಾವಿರ್​ ಹುಸೇನ್​ ಹಾಗೂ ಮತೀನ್ ತಾಹನನ್ನ ಬಂಧಿಸಿದೆ.

ಸಿಎಂ ಸಿದ್ದರಾಮಯ್ಯ ಏನೆಂದರು? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ದಳ ಮತ್ತು ಕರ್ನಾಟಕ ಪೊಲೀಸರಿಗೆ ನಾನು ಧನ್ಯವಾದ ಹೇಳುತ್ತೇನೆ. ಆರೋಪಿಗಳನ್ನು ತನಿಖೆ ಮಾಡಿದ ನಂತರ ಹೆಚ್ಚಿನ ವಿವರ ಗೊತ್ತಾಗಲಿದೆ ಎಂದರು.

ಗೃಹ ಸಚಿವರು ಏನು ಹೇಳಿದರು?: ಬೆಂಗಳೂರು ಕೆಫೆ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕುರಿತು ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ, ನಾವು ತನಿಖೆ ಆರಂಭಿಸಿದ್ದೇವೆ. ಎಲ್ಲಾ ಮಾಹಿತಿಗಳನ್ನು ಎನ್‌ಐಎ ಜೊತೆ ಹಂಚಿಕೊಳ್ಳಲಾಗಿದೆ. ನಮ್ಮ ಪೊಲೀಸರು ತನಿಖೆಯ ಪ್ರಗತಿಯಲ್ಲಿದ್ದಾರೆ. ಆರೋಪಿ ಟೊಪ್ಪಿಯನ್ನು ಖರೀದಿಸಿದ್ದು ಚೆನ್ನೈಯಲ್ಲಿ, ಬಾಂಬ್ ಇಟ್ಟ ನಂತರ ಬಾಂಗ್ಲಾದೇಶಕ್ಕೆ ಪರಾರಿಯಾಗಲು ಯೋಜನೆ ಹೊಂದಿದ್ದರೋ ಇಲ್ಲವೋ ಎಂಬುದು ಗೊತ್ತಾಗಬೇಕಿದೆ. ವಿದೇಶಗಳಿಂದ ಅಥವಾ ಬೇರೆ ಕಡೆಯಿಂದ ಯಾರಾದರೂ ಅವರಿಗೆ ಸಹಾಯ ಮಾಡುತ್ತಿದ್ದರೇ ಎಂದು ತನಿಖೆಯಿಂದ ಪತ್ತೆಹಚ್ಚಲಾಗುವುದು ಎಂದರು.

ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಕರೆತರುತ್ತಿರುವುದು
Rameshwaram Cafe blast: ಕೊನೆಗೂ ಬಾಂಬರ್ ಗಳ ಬಂಧನ, ಬಂಗಾಳದಲ್ಲಿ ಇಬ್ಬರು ಶಂಕಿತರು NIA ವಶಕ್ಕೆ!

ಇಂದು ನ್ಯಾಯಾಧೀಶರ ಮುಂದೆ ಹಾಜರು: ಇಬ್ಬರೂ ಆರೋಪಿಗಳನ್ನು ಇಂದು ಬೆಂಗಳೂರಿನ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ನ್ಯಾಯಾಧೀಶರು ಹೆಚ್ಚಿನ ವಿಚಾರಣೆಗೆ ಇನ್ನಷ್ಟು ದಿನ ವಶಕ್ಕೆ ನೀಡುವಂತೆ ಎನ್ ಐಎ ಮುಂದೆ ಕೇಳುವ ಸಾಧ್ಯತೆಯಿದೆ.

ಉಗ್ರರ ಬಳಿ ಕರ್ನಾಟಕದ ಇಬ್ಬರ ನಕಲಿ ಆಧಾರ ಕಾರ್ಡ್​ ಪತ್ತೆ: ಇಬ್ಬರ ಬಂಧನ ಬಳಿಕ ಉಗ್ರರ ಬಳಿ ಕರ್ನಾಟಕದ ಇಬ್ಬರ ನಕಲಿ ಆಧಾರ ಕಾರ್ಡ್​ ಪತ್ತೆಯಾಗಿವೆ. ಎನ್​ಐಎ ಅಧಿಕಾರಿಗಳು ಉಗ್ರರನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬಂಧಿಸಿದ್ದು, ಆರೋಪಿಗಳ ಬಳಿ ಕಲಬುರಗಿಯ ಓರ್ವ ಯುವಕನ ನಕಲಿ ಆಧಾರ ಕಾರ್ಡ್ ಪತ್ತೆಯಾಗಿದೆ.

ಕಲಬುರಗಿಯ ವರ್ದಾನಗರ ನಿವಾಸಿಯಾಗಿರುವ ಅನಮೂಲ ಕುಲಕರ್ಣಿ ಎಂಬ ಯುವಕನ ನಕಲಿ ಆಧಾರ‌ ಕಾರ್ಡ್​ ಉಗ್ರರ ಬಳಿ ಇತ್ತು. ಟೆಕ್ಕಿ ಅನಮೂಲ ಕುಲಕರ್ಣಿ ಸದ್ಯ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಉಗ್ರರಿಗೆ ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್ ಸಿಕ್ಕಿದ್ದಾದರು ಹೇಗೆ? ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್​​ ಅನ್ನು ಉಗ್ರರರು ಹೇಗೆ ಪಡೆದರು? ಹೀಗೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com