ಲೋಕ ಸಮರ 2024: ಇಂದಿನಿಂದ 85 ವರ್ಷ ಮೇಲ್ಪಟ್ಟವರಿಗೆ 'Vote from Home'ಗೆ ಅವಕಾಶ

ಲೋಕಸಭಾ ಚುನಾವಣೆ ವೇಳೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಶನಿವಾರದಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು ನೋಂದಾಯಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಶನಿವಾರದಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಇಂದಿನಿಂದ ಏಪ್ರಿಲ್ 18ರವರಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮನೆಯಿಂದ ಮತದಾನ ಮಾಡಲು ಈಗಾಗಲೇ ನೋಂದಾಯಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಚುನಾವಣಾ ಸಿಬ್ಬಂದ ಮನೆಗಳಿಗೆ ತೆರಳಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನ ಮಾಡಿಸುತ್ತಾರೆ.

ಕಳೆದ ಚುನಾವಣೆ ವೇಳೆ ಕರ್ನಾಟಕ ರಾಜ್ಯವು ಮೊಟ್ಟ ಬಾರಿಗೆ 80 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಮನೆಯಿಂಜಲೇ ಮತದಾನ ಮಾಡುವ ಅವಕಾಶ ಕಲ್ಪಿಸಿತ್ತು. ಇದನ್ನು ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ ವಿಸ್ತರಣ ಮಾಡಲಾಗಿದ್ದು, 85 ವರ್ಷಕ್ಕೆ ಹೆಚ್ಚಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 3,40,856 ಮತದಾರರು 85 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, 36,691 ಮತದಾರರು ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದಾರೆ. ಇನ್ನು ಅಂಗವಿಕಲ ಮತದಾರರು ರಾಜ್ಯದಲ್ಲಿ ಒಟ್ಟು 2,76,042 ಇದ್ದು, ಈ ಪೈಕಿ ಮನೆಯಿಂದಲೇ ಮತದಾನ ಮಾಡಲು 12,957 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 49,648 ರಷ್ಟು 85 ವರ್ಷಕ್ಕಿಂತ ಮೇಲ್ಪಟ್ಟು ಮತ್ತು ಅಂಗವಿಕಲ ಮತದಾರರಾಗಿದ್ದಾರೆ. ಮತದಾನದ ವೇಳೆ ಕೈಗೊಳ್ಳುವ ಕ್ರಮಗಳನ್ನೇ ಮಾಡಲಾಗುತ್ತದೆ. ಮನೆಯಲ್ಲಿಯೇ ಗೌಪ್ಯ ಮತದಾನದ ವ್ಯವಸ್ಥೆ ಮಾಡಿಕೊಂಡು ಮತಚಲಾಯಿಸಲು ಅವಕಾಶ ನೀಡಲಾಗುತ್ತದೆ.

ಸಂಗ್ರಹ ಚಿತ್ರ
Vote from Home ಅವಕಾಶವಿದ್ದರೂ ಮತಗಟ್ಟೆಗೇ ಬಂದು ಮತದಾನ: ಯುವ ಮತದಾರರಿಗೆ ಹಿರಿಯರು, ಅಂಗವಿಕಲರೇ ಸ್ಫೂರ್ತಿ!

ನೋಂದಾಯಿದ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಲ್ಲಿ ದಕ್ಷಿಣ ಕನ್ನಡ ಕ್ಷೇತ್ರದವರು ಹೆಚ್ಚಾಗಿದ್ದಾರೆ. ಈ ಕ್ಷೇತ್ರದಲ್ಲಿ 6,053 ಮಂದಿ ನೋಂದಾಯಿಸಿಕೊಂಡಿದ್ದಾರೆ. ಚಾಮರಾಜನಗರದಲ್ಲಿ 982 ಮಂದಿ ನೋಂದಾಯಿಸಿಕೊಳ್ಳುವ ಮೂಲಕ ಕಡಿಮೆ ನೋಂದಾಯಿತ ಕ್ಷೇತ್ರವಾಗಿದೆ.

ಇನ್ನುು ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡ ಅಂಗವಿಕಲರ ಪೈಕಿ ಚಿತ್ರದುರ್ಗ ಕ್ಷೇತ್ರದಲ್ಲಿ ಹೆಚ್ಚಾಗಿ ನೋಂದಾಯಿಸಿಕೊಂಡಿದ್ದಾರೆ. ಕ್ಷೇತ್ರದಲ್ಲಿ 2059 ಮಂದಿ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತ್ಯಂತ ಕಡಿಮೆ 54 ಮಂದಿ ಮಾತ್ರ ನೋಂದಾಯಿಸಿಕೊಂಡಿದ್ದಾರೆ.

ವಿಎಫ್‌ಹೆಚ್ ಶೇಕಡಾವಾರು ತುಂಬಾ ಕಡಿಮೆಯಾಗಿದೆ. ಸಾಕಷ್ಟು ಜನರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಉತ್ಸುಕರಾಗಿದ್ದಾರೆ. ಲೋಕಸಭೆ ಚುನಾವಣೆಗೆ ಇದೇ ಮೊದಲ ಬಾರಿಗೆ ವಿಎಫ್‌ಎಚ್‌ ವ್ಯವಸ್ಥೆ ಬಳಕೆ ಮಾಡಲಾಗುತ್ತಿದೆ.. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಳಕೆ ಮಾಡಲಾಗಿತ್ತು., 224 ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 99,535 ಮಂದಿ ಈ ವ್ಯವಸ್ಥೆ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದರು ಎಂದು ಹೆಚ್ಚುವರಿ ಸಿಇಒ ವೆಂಕಟೇಶ್ ಕುಮಾರ್ ಆರ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com