ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: HD ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ

ತುಮಕೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದರು.

ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

ಸ್ಥಳದಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನು ಕೇಳಿ. ಇವತ್ತಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ” ಎಂದು ಟೀಕಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ
ಡಿಕೆ ಶಿವಕುಮಾರ್‌ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ; ತಕ್ಕ ಉತ್ತರ ನೀಡಲಿದೆ: ಎಚ್‌ಡಿ ಕುಮಾರಸ್ವಾಮಿ

ಬೆಳಗ್ಗೆ ಎದ್ದು ಯಾವ ಪತ್ರಿಕೆ ನೋಡಿದರೂ ಗ್ಯಾರಂಟಿಯದ್ದೇ ಜಾಹೀರಾತು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಫೋಟೋಗಳನ್ನು ಹಾಕಿಕೊಂಡು, ಈಗಾಗಲೇ ರೂ.300 ಕೋಟಿಯಷ್ಟು ಹಣವನ್ನು ಜಾಹೀರಾತಿಗಾಗಿ ಖರ್ಚು ಮಾಡಿದ್ದಾರೆ. ಅದೆಲ್ಲವೂ ನಿಮ್ಮ ದುಡ್ಡು. ಈ ಹಣ ಕಾಂಗ್ರೆಸ್ ಕಚೇರಿಯಿಂದಲೋ ಅಥವಾ ಅವರ ಜೇಬಿನಿಂದ ಹಾಕಿರುವ ದುಡ್ಡಲ್ಲ. ಸಾರ್ವಜನಿಕರ ಹಣ. ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ. ನೆಹರೂ ಕಾಲದಿಂದಲೂ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೆಲವು ನಿಯಮಗಳನ್ನು ವಿಧಿಸಲಾಗಿದೆ. ಹಣವನ್ನು ಬಿಡುಗಡೆ ಮಾಡುವಾಗ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗುತ್ತದೆ ಎಂದರು. ಈ ಮೂಲಕ ಬರ ಪರಿಹಾರ ನೀಡದ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com