ಗೋವಾದಲ್ಲಿ ಕನ್ನಡಿಗರ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಚಂದ್ರು

ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿರುವುದನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರು
ಮುಖ್ಯಮಂತ್ರಿ ಚಂದ್ರು
Updated on

ಬೆಂಗಳೂರು: ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿರುವುದನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.

ನಾಲ್ಕಾರು ದಶಕಗಳಿಂದ ನೆಲೆಸಿರುವ ಕನ್ನಡಿಗರ ಮೇಲೆ ಗೋವಾ ಸರ್ಕಾರ ನಡೆಸುತ್ತಿರುವ ಅಮಾನವೀಯ ಕೃತ್ಯಗಳು ಖಂಡನಾರ್ಹ. ನ್ಯಾಯಾಲಯದ ನಿರ್ದೇಶನಗಳನ್ನು ಮೀರಿ ಏಕಾಏಕಿ ಮನೆಗಳನ್ನೆಲ್ಲ ಒಡೆದು ಬೀದಿಪಾಲು ಮಾಡಿರುವುದು ಅಕ್ಷಮ್ಯ. ಗೋವಾದ ಮತದಾರರಾಗಿ, ಗೋವಾ ಅಭಿವೃದ್ಧಿಗೆ ಸತತ ಶ್ರಮಿಸುತ್ತಿರುವ ಕನ್ನಡಿಗರ ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸುತ್ತಿರುವುದು ಅಘಾತಕಾರಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ತಕ್ಷಣ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿ ಪುನರ್ವಸತಿ ಕಲ್ಪಿಸಿಕೊಡಬೇಕು ಹಾಗೂ ಕೇಂದ್ರ ಸರ್ಕಾರ ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರ ಜೊತೆ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸಬೇಕು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಚಂದ್ರು
ಪ್ರಧಾನಿ ಮೋದಿಯವರ ಹಠದಿಂದಾಗಿ, ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಪ್ರಧಾನಿ ನರೇಂದ್ರ ಮೋದಿ ಅವರು ಮಾತೆತ್ತಿದರೆ ಒಂದು ರಾಷ್ಟ್ರ ಎನ್ನುತ್ತಾರೆ. ಆದರೆ ಒಂದೇ ರಾಷ್ಟ್ರದಲ್ಲಿ ತಮ್ಮದೇ ಸರ್ಕಾರವಿರುವ ಗೋವಾ ಸರ್ಕಾರವು ಕನ್ನಡಿಗರನ್ನು ಶತ್ರುಗಳನ್ನಾಗಿ ನೋಡುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವುದೇಕೆ? ಒಂದು ರಾಷ್ಟ್ರ ಎಂಬ ಪರಿಕಲ್ಪನೆ ಎಂದರೆ ಇದೇನಾ? ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಬಿಜೆಪಿಯೇತರ ರಾಜ್ಯಗಳ ಮೇಲೆ ಏನು ದಬ್ಬಾಳಿಕೆ ನಡೆಸಿದರೂ ಸಹಿಸಿಕೊಂಡಿರಬೇಕೆ? ಎಂದು ಕಿಡಿಕಾರಿದ್ದಾರೆ.

ಗೋವಾದ ದಬ್ಬಾಳಿಕೆ ವಿರುದ್ಧ ಕರ್ನಾಟಕದ 26 ಸಂಸದರು ಧ್ವನಿಯೆತ್ತುತ್ತಿಲ್ಲ ಏಕೆ? ಅವರನ್ನು ಸಂಸತ್ತಿಗೆ ಆರಿಸಿ ಕಳುಹಿಸಿರುವುದು ಕನ್ನಡಿಗರ ಹಿತ ಕಾಯುವುದಕ್ಕೋ ಅಥವಾ ಬಿಜೆಪಿ ಆಡಳಿತದ ಸರ್ಕಾರಗಳು ಕನ್ನಡಿಗರ ಮೇಲೆ ಏನೇ ದೌರ್ಜನ್ಯ ಎಸಗಿದರು ಬಾಯಿಮುಚ್ಚಿಕುಳಿತುಕೊಳ್ಳುವುದಕ್ಕೋ? ಕನ್ನಡ ಭಾಷೆ, ಕಾವೇರಿ ನೀರು, ಕನ್ನಡಿಗರ ಹಿತಾಸಕ್ತಿಗೆ ನಯಾಪೈಸೆಯ ಬೆಲೆ ಕೊಡದ ಇಂತಹ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗೋವಾದಲ್ಲಿ ಮನೆ ಕಳೆದುಕೊಂಡಿರುವ ಕನ್ನಡಿಗರ ನೆರವಿಗೆ ಧಾವಿಸಬೇಕು. ಕನ್ನಡಿಗರ ಮೇಲಿನ ದೌರ್ಜನ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಸಂತ್ರಸ್ತರ ಬೆನ್ನಿಗೆ ನಿಲ್ಲಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com