ಹುಬ್ಬಳ್ಳಿಯಲ್ಲಿ ಕಾರು-ಖಾಸಗಿ ಬಸ್​ ಡಿಕ್ಕಿ; ಮೂವರು ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರು ಆಂಧ್ರ ಪ್ರದೇಶದ ಕರ್ನೂಲ ಜಿಲ್ಲೆಯ ನಿವಾಸಿಗಳಾಗಿದ್ದಾರೆ.
ಅಪಘಾತ ನಂತರದ ದೃಶ್ಯ
ಅಪಘಾತ ನಂತರದ ದೃಶ್ಯ
Updated on: 

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತರು ಆಂಧ್ರ ಪ್ರದೇಶದ ಕರ್ನೂಲ ಜಿಲ್ಲೆಯ ನಿವಾಸಿಗಳಾಗಿದ್ದಾರೆ.

ಕಾರು ಖಾಸಗಿ ಬಸ್​ಗೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮದ್ಯದ ಬಾಟಲ್‌ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪಘಾತ ನಂತರದ ದೃಶ್ಯ
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿ ಹೊಡೆದು ನಾಲ್ವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ, ಬೈಕ್​ ಸವಾರ ಸಾವು: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಚಳಮಟ್ಟಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೆಹಬೂಬ್​ಸಾಬ್ ಮುಲ್ಲಾ (49b) ಮೃತ ದುರ್ದೈವಿ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ​​ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com