ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ; ಸರ್ಕಾರದ ಅನಧಿಕೃತ ವಕ್ತಾರನ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!

ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?
ಪ್ರಕಾಶ್ ರಾಜ್
ಪ್ರಕಾಶ್ ರಾಜ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್‌ ರೈ ಉರುಫ್‌ @prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಎಕ್ಸ್ ನಲ್ಲಿ ಬರೆದುಕೊಂಡಿರುವ ಜೆಡಿಎಸ್, ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just Asking.. ಅಷ್ಟೇ ಪ್ರಕಾಶ್‌ ರಾಜ್‌ ಅವರೇ.. ಎಂದು ಪ್ರಶ್ನಿಸಿದೆ. ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್‌ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ 'ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್‌ ರಾಜ್‌ ಅವರೇ ಎಂದು ತಪರಾಕಿ ಹಾಕಿದೆ.

ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಿಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳಕಂಪನಿಗೆ ಕೋಟಿ ಕೋಟಿ ಸುರಿದಿರುವ ಕರ್ನಾಟಕ ಕಾಂಗ್ರೆಸ್ ಸರಕಾರ, ನಿಮ್ಮ 'ನಿರ್ದಿಗಂತʼಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ? Just Asking.. ಅಷ್ಟೇ ಪ್ರಕಾಶ್‌ ರಾಜ್‌ ಅವರೇ ಎಂದು ಜೆಡಿಎಸ್ ಕಿಡಿ ಕಾರಿದೆ.

ಪ್ರಕಾಶ್ ರಾಜ್
ಮಂಡ್ಯದ ಮಗ ಯಾರು, ಕಳ್ಳ ನನ್ಮಗ ಯಾರು ಎಂಬುದನ್ನು ಜನ ನಿರ್ಧರಿಸುತ್ತಾರೆ: ಪ್ರಕಾಶ್ ರೈ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com