ಚಿತ್ರದುರ್ಗ: ನಗರದ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿ ಸಂಪಿಯಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದೆ. ಮೃತರನ್ನು ಭದ್ರಾವತಿಯ ಗೀತಾ (40) ಹಾಗೂ ಪ್ರಿಯಾಂಕಾ (22) ಎಂದು ಗುರುತಿಸಲಾಗಿದೆ.
ಇವರಿಬ್ಬರೂ ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಪೂಜೆ ಮಾಡಿಕೊಂಡು ಆಶ್ರಮದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ವರದಿಯಾಗಿದೆ.
Advertisement