'ಚಿತ್ರೋದ್ಯಮಕ್ಕೆ Actor Dwarakish ಕೊಡುಗೆ ಅಪಾರ': ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ!

ಹೃದಯಾಘಾತದಿಂದ ನಿಧನರಾದ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಕೊಡುಗೆ ಅಪಾರ ಎಂದು ಬಣ್ಣಿಸಿದ್ದಾರೆ.
ನಟ ದ್ವಾರಕೀಶ್
ನಟ ದ್ವಾರಕೀಶ್

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಕೊಡುಗೆ ಅಪಾರ ಎಂದು ಬಣ್ಣಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಸದಾ ನೆನಪಿನಲ್ಲಿ ಉಳಿಯುವ ನಟನೆ ಹಾಗೂ ಸಿನಿಮಾಗಳನ್ನು ನೀಡಿದ್ದಾರೆ.

ಪ್ರೇಕ್ಷಕರನ್ನು ಸೆಳೆದಿಟ್ಟುಕೊಳ್ಳುವ ಹಾಗೂ ಹೊಸಬರನ್ನು ಬೆಂಬಲಿಸು ಮೂಲಕ ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದಿಂದ ದುಃಖವಾಗಿದೆ. ಅವರ ಅದ್ಭುತ ಜರ್ನಿಯನ್ನು ನಾವು ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ" ಎಂದು ಟ್ವೀಟ್ ಮಾಡಿದ್ದಾರೆ.

ನಟ ದ್ವಾರಕೀಶ್
Actor Dwarakish Demise: ರವೀಂದ್ರ ಕಲಾಕ್ಷೇತ್ರಕ್ಕೆ ನಟ ದ್ವಾರಕೀಶ್ ಪಾರ್ಥೀವ ಶರೀರ ರವಾನೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ

ನಟ ಶಿವರಾಜ್ ಕುಮಾರ್ ಸೇರಿ ಗಣ್ಯರಿಂದ ಅಂತಿಮ ದರ್ಶನ

ಇನ್ನು ದ್ವಾರಕೀಶ್ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಕಿಚ್ಚ ಸುದೀಪ್, ದರ್ಶನ್, ಪ್ರಧಾನಿ ನರೇಂದ್ರ ಮೋದಿ, ರಜನಿಕಾಂತ್ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ. ಸದ್ಯ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ಗಾಗಿ ಸುದೀಪ್ ಚೆನ್ನೈನಲ್ಲಿದ್ದಾರೆ. ಅಲ್ಲಿಂದ ವಿಮಾನದಲ್ಲಿ ಅವರು ಬರಲಿದ್ದಾರೆ. ಬಹುತೇಕ ಚಿತ್ರರಂಗದ ಕಲಾವಿದರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸುವ ಸಾಧ್ಯತೆ ಇದೆ.

ಇನ್ನು ದ್ವಾರಕೀಶ್ ಅಂತಿಮ ವಿಧಿ ವಿಧಾನಗಳನ್ನು ಅವರ ಮನೆಯಲ್ಲಿ ನೆರವೇರಿಸಲಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅವರ ನಿವಾಸದಲ್ಲಿ ಕಾರ್ಯಗಳು ನಡಿದ್ದಿದ್ದು, ಶಿವರಾಜ್‌ಕುಮಾರ್ ಅಂತಿಮ ದರ್ಶನ ಪಡೆದಿದ್ದಾರೆ. ಇದೇ ವೇಳೆ "ದ್ವಾರಕೀಶ್ ಅವರು ಇಲ್ಲ ಅಂತ ನೆನಪಿಸಿಕೊಳ್ಳುವುದಕ್ಕೂ ಕಷ್ಟ. ಅವರು ಕನ್ನಡದ ಟಾಪ್ ಮೋಸ್ಟ್ ಪ್ರೊಡ್ಯೂಸರ್ ಅಂತ ಹೇಳಿದರೆ ತಪ್ಪಾಗುವುದಿಲ್ಲ." ಎಂದು ಶಿವಣ್ಣ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 11.30ರವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದ್ದು, ಬಳಿಕ ಬೆಂಗಳೂರಿನ ಚಾಮರಾಜಪೇಟೆ ಟಿಆರ್​ಮಿಲ್​ನಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ.

ದ್ವಾರಕೀಶ್ ಅವರು ಕನ್ನಡದಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಅವರು, 15ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com