ಏಪ್ರಿಲ್ 20 ರಂದು ರಾಜ್ಯಕ್ಕೆ ಪಿಎಂ ಮೋದಿ ಆಗಮನ: ಚಿಕ್ಕಬಳ್ಳಾಪುರ- ಬೆಂಗಳೂರಿನಲ್ಲಿ ಮತಯಾಚನೆ

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಕ್ಕೆ ಕರೆಸಲು ತೀರ್ಮಾನಿಸಿದ್ದಾರೆ.
Narendra Modi
ನರೇಂದ್ರ ಮೋದಿTNIE
Updated on

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಕ್ಕೆ ಕರೆಸಲು ತೀರ್ಮಾನಿಸಿದ್ದಾರೆ.

ಏ. 20ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.​ಡಿ. ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಬಳಿಕ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಇದೇ ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರದ ದೇವನಹಳ್ಳಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲೂ ಪ್ರಧಾನಿ ಮೋದಿ-ಹೆಚ್‌ಡಿ ದೇವೇಗೌಡ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Narendra Modi
'ಪ್ರತಿಯೊಬ್ಬರೂ ವಿಷಾದಿಸುತ್ತಾರೆ': ಚುನಾವಣಾ ಬಾಂಡ್ ಯೋಜನೆ ರದ್ದತಿ ಬಗ್ಗೆ ಪ್ರಧಾನಿ ಮೋದಿ ಟೀಕೆ

ಒಂದೇ ದಿನ ರಾಜ್ಯದಲ್ಲಿ ಎರಡು ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com