ಸಾಕುಪ್ರಾಣಿ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ನಿಯಮಗಳ ಅಗತ್ಯವಿದೆ: ಕರ್ನಾಟಕ ಹೈಕೋರ್ಟ್

ಜನರಿಗೆ ಗಾಯವನ್ನುಂಟುಮಾಡುವುದು ಕೇವಲ ಅಪಾಯಕಾರಿ ತಳಿಯ ಶ್ವಾನಗಳು ಮಾತ್ರವಲ್ಲ, ಯಾವುದೇ ನಾಯಿಯೂ ಉಗ್ರವಾಗಬಹುದು ಎಂಬುದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಜನರಿಗೆ ಗಾಯವನ್ನುಂಟುಮಾಡುವುದು ಕೇವಲ ಅಪಾಯಕಾರಿ ತಳಿಯ ಶ್ವಾನಗಳು ಮಾತ್ರವಲ್ಲ, ಯಾವುದೇ ನಾಯಿಯೂ ಉಗ್ರವಾಗಬಹುದು ಎಂಬುದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.

ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ನಾಯಿ ಸಂತಾನೋತ್ಪತ್ತಿ ಮತ್ತು ಮಾರುಕಟ್ಟೆ) ನಿಯಮಗಳು, 2017 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ (ಪೆಟ್ ಶಾಪ್) ನಿಯಮಗಳು, 2018 ಅಡಿಯಲ್ಲಿ ಅಂತಹ ಮಾರ್ಗಸೂಚಿಗಳನ್ನು ನೀಡಲು ಪರಿಗಣಿಸಬಹುದು ಎಂದು ನ್ಯಾಯಾಲಯ ಹೇಳಿದೆ.

'ನಾಯಿ ಕಚ್ಚಿದರೆ ಅದು ಯಾವುದೇ ನಾಯಿಯಾಗಿದ್ದರೂ ಅದು ನಾಯಿ ಕಚ್ಚಿದ್ದೇ ಆಗಿರುತ್ತದೆ. ಅದು ಬ್ರಾಂಡೆಡ್ ಅಪಾಯಕಾರಿ ನಾಯಿ ಅಥವಾ ಇತರ ಯಾವುದೇ ಸಾಮಾನ್ಯ ನಾಯಿಯಾಗಿರಬಹುದು. ಸಾಕುಪ್ರಾಣಿ ಮಾಲೀಕರು ತಮ್ಮ ನಾಯಿಗಳ ಕೃತ್ಯಕ್ಕೆ ಸಂಪೂರ್ಣವಾಗಿ ಜವಾಬ್ದಾರರಾಗುತ್ತಾರೆ. ಸಾಕುಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು.

ಸೂಕ್ತವಾಗಿ ರಚಿಸಲಾದ ಸಮಿತಿಯು ಜವಾಬ್ದಾರಿಯುತ ಸಾಕುಪ್ರಾಣಿಗಳ ಮಾಲೀಕತ್ವದ ಪರಿಕಲ್ಪನೆಯನ್ನು ರಕ್ಷಿಸಬೇಕು ಮತ್ತು ಬೇಜವಾಬ್ದಾರಿಯುತ ಸಾಕುಪ್ರಾಣಿ ಮಾಲೀಕತ್ವವನ್ನು ದಂಡನೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ಹೈಕೋರ್ಟ್
ಅಪಾಯಕಾರಿ ಶ್ವಾನ ಸಾಕಾಣಿಕೆ ನಿಷೇಧ ಕಾನೂನಿಗೆ ವಿರುದ್ಧ: ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಣೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಏ.10) ರದ್ದುಗೊಳಿಸಿದೆ.

ಇಂತಹ ಆಲೋಚನಾ ಪ್ರಕ್ರಿಯೆಯು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಮತ್ತು ನಾಯಿ ಮಾಲೀಕರು ಅಥವಾ ಯಾವುದೇ ಸಾಕುಪ್ರಾಣಿಗಳು ಮಾಲೀಕರು ಯಾವುದೇ ನಾಗರಿಕರಿಗೆ / ಇತರ ಜೀವಿಗಳಿಗೆ ಹಾನಿಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಆಯಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಗೆ ಸಾಕುಪ್ರಾಣಿ ಮಾಲೀಕರು ಜವಾಬ್ದಾರರಾಗಿರುತ್ತಾರೆ. ಸಾಕುಪ್ರಾಣಿಗಳಿಂದಾಗುವ ಯಾವುದೇ ರೀತಿಯ ಬೇಜವಾಬ್ದಾರಿಯುತ ನಡವಳಿಕೆಗೆ ಸಾಕುಪ್ರಾಣಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ ಎಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com