ಶ್ರೀರಂಗಪಟ್ಟಣ: ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಅನುಮಾನಾಸ್ಪದ ಸಾವು!

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಪಟ್ಟ ತ್ರಿಶೂಲ್ ಮತ್ತು ತ್ರಿಶಾ
ಮೃತ ಪಟ್ಟ ತ್ರಿಶೂಲ್ ಮತ್ತು ತ್ರಿಶಾ

ಶ್ರೀರಂಗಪಟ್ಟಣ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿದ ಮಕ್ಕಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಖರೀದಿಸಿ ತಿನ್ನಿಸಿದ್ದರು. ಐಸ್ ಕ್ರೀಂ ತಿಂದ ಕೆಲವೇ ಸಮಯದಲ್ಲಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತರಾದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದೇ ಗ್ರಾಮದ ಬೇರೆ ಮಕ್ಕಳು ಕೂಡ ಆತನಿಂದಲೇ ಐಸ್‌ಕ್ರೀಂ ಖರೀದಿಸಿ ‌ತಿಂದಿದ್ದರು. ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತ ಪಟ್ಟ ತ್ರಿಶೂಲ್ ಮತ್ತು ತ್ರಿಶಾ
ಅವಳಿ ಮಕ್ಕಳ ತಾಯಿ ಸಾವು: ರಾಜ್ಯದಲ್ಲಿ ಸುಧಾರಿತ ಹೆರಿಗೆ ಸೌಲಭ್ಯಗಳ ಕಲ್ಪಿಸಿ; ಸರ್ಕಾರಕ್ಕೆ ತಜ್ಞರ ಸಲಹೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com