ಗದಗ: ನಗರ ಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಮಲಗಿದ್ದಲ್ಲೇ ಭೀಕರ ಕೊಲೆ!

ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.
ಹತ್ಯೆಯಾದ ನಾಲ್ವರು
ಹತ್ಯೆಯಾದ ನಾಲ್ವರು

ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.

ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನುು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು.

ಹತ್ಯೆಯಾದ ನಾಲ್ವರು
ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್​ನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಪುತ್ರಿಯ ಭೀಕರ ಕೊಲೆ, ಆರೋಪಿ ಫಯಾಜ್ ಬಂಧನ

ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಲ್ಲೆ ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೊಲೆ ನಡೆದ ಪ್ರಕಾಶ್​ ಬಾಕಳೆ ಮನೆಗೆ ಸಚಿವ ಹೆಚ್.ಕೆ.ಪಾಟೀಲ್​​ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ಹೇಳಿದರು.

ಈ ವೇಳೆ ಕುಟುಂಬಸ್ಥರು ಕೊಲೆಗಾರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಆರೋಪಿಗಳನ್ನು ಕೂಡಲೆ ಬಂಧಿಸಲಾಗುವುದು ಎಂದು ಸಚಿವ ಹೆಚ್​.ಕೆ ಪಾಟೀಲ್​​ ಕುಟುಂಬಸ್ಥರಿಗೆ ವಿಶ್ವಾಸ ನೀಡಿದರು. ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com