'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನ: 30 ದಿನಗಳಲ್ಲಿ 9 ಸಾವಿರ ಜಲಮಿತ್ರರ ನೋಂದಣಿ

'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನಕ್ಕೆ ಸಿಲಿಕಾನ್ ಸಿಟಿ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಜನರು ಜಲಮಿತ್ರ ಎಂದು ನೋಂದಾಯಿಸಿಕೊಂಡಿದ್ದಾರೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನಕ್ಕೆ ಸಿಲಿಕಾನ್ ಸಿಟಿ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಜನರು ಜಲಮಿತ್ರ ಎಂದು ನೋಂದಾಯಿಸಿಕೊಂಡಿದ್ದಾರೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಜಲಮಿತ್ರರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ನೀರು ಉಳಿಸಿ-ಬೆಂಗಳೂರು ಬೆಳೆಸಿ ಅಭಿಯಾನದ ಅಂಗವಾಗಿ ಮಾರ್ಚ್ 14 ರಂದು ಜಲಮಿತ್ರ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಕಳೆದ 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಜನರು ಜಲಮಿತ್ರ ಎಂದು ನೋಂದಾಯಿಸುವ ಮೂಲಕ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆಂದು ಹೇಳಿದರು.

ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ನಿಮ್ಮ ಸಹಕಾರ ಅತ್ಯಗತ್ಯ. ಜನರ ಸಹಭಾಗಿತ್ವವಿಲ್ಲದೆ ಯಾವುದೇ ಸರ್ಕಾರಿ ಯೋಜನೆಗಳು ಹೆಚ್ಚಿನದನ್ನು ಸಾಧಿಸಲು ಸಾಧ್ಯವಿಲ್ಲ.2026 ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿಯಾಗಿದೆ ಇದಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿಕೊಂಡರು.

ಸಂಗ್ರಹ ಚಿತ್ರ
2026ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿ: BWSSB

ನೀರಿನ ಪ್ರಾಮುಖ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಮತ್ತು ಜಲಮಂಡಳಿಯ ಜನಸ್ನೇಹಿ ಕಾರ್ಯಕ್ರಮಗಳು ಮತ್ತು ನೀರು ಸರಬರಾಜು, ಒಳಚರಂಡಿ ನಿರ್ವಹಣೆ, ನೀರು ಸಂರಕ್ಷಣೆ, ಮಳೆ ನೀರು ಸಂಗ್ರಹ ಮುಂತಾದ ಚಟುವಟಿಕೆಗೆ ಸಂಬಂಧಿಸಿ ಜಾಗೃತಿ ಮೂಡಿಸಲು ಸ್ವಯಂ ಸೇವಕರಾಗಿ ಕೆಲಸ ಮಾಡುವವರನ್ನು ಜಲಮಿತ್ರರನ್ನಾಗಿ ನೇಮಿಸುವ ಅಭಿಯಾನ ಇದಾಗಿದೆ. ಸಂಸ್ಕರಿಸಿದ ತ್ಯಾಜ್ಯ ನೀರಿನ ಮರುಬಳಕೆ, ಸಾರ್ವಜನಿಕರಿಂದ ನೀರು ವ್ಯರ್ಥವಾಗುವ ವಿವರಗಳನ್ನು ಸಂಗ್ರಹಿಸುವುದು, ಒಳಚರಂಡಿ ಸಮಸ್ಯೆಗಳು, ನೀರಿನ ಸಂಗ್ರಹ ಸಂಪ್‌ಗಳು ಮತ್ತು ಟ್ಯಾಂಕ್‌ಗಳಿಂದ ನೀರು ವ್ಯರ್ಥವಾಗಿ ಹರಿಯುವುದನ್ನು ತಡೆಯುವುದು. ಇದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಜಲಮಿತ್ರರ ಕರ್ತವ್ಯ.

ಬಿಡಬ್ಲ್ಯುಎಸ್ಎಸ್'ಬಿ ನೀಡಿರುವ ಮಾಹಿತಿಯನ್ನು ಜನರಿಗೆ ತಲುಪಿಸಬೇಕು. ನೀರು ಸರಬರಾಜು ಮತ್ತು ಒಳಚರಂಡಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಲಮಿತ್ರರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಲಯ ಮುಖ್ಯ ಇಂಜಿನಿಯರ್ ವೆಂಕಟೇಶ್ ಸೇರಿದಂತೆ 500ಕ್ಕೂ ಹೆಚ್ಚು ಜಲಮಿತ್ರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com