ಸಾಂದರ್ಭಿಕ ಚಿತ್ರ
ರಾಜ್ಯ
ಕಾದು ಕೆಂಡವಾಗಿದ್ದ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆ: ಎಲ್ಲೆಲ್ಲಿ ಮಳೆಯಾಗುತ್ತಿದೆ?
ಸುಡು ಬಿಸಿಲಿನಿಂದ ಪರಿತಪಿಸುತ್ತಿದ್ದ ಬೆಂಗಳೂರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ.
ಬೆಂಗಳೂರು: ಸುಡು ಬಿಸಿಲಿನಿಂದ ಪರಿತಪಿಸುತ್ತಿದ್ದ ಬೆಂಗಳೂರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದ್ದು ಮಾಗಡಿ ರಸ್ತೆ, ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಈ ಮೂಲಕ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆ ಕೊಂಚ ತಂಪೆರೆದಿದೆ.
ಮಳೆಯ ಆಗಮನವಾಗಿರುವುದು ಬೆಂಗಳೂರಿಗರ ಮೊಗದಲ್ಲಿ ಸಂತಸ ಮೂಡಿಸಿದೆ. ಸದ್ಯ ಕೆಂಗೇರಿ ಮತ್ತು ಯಲಹಂಕ ಕಡೆ ಮಳೆಯಾಗುತ್ತಿದ್ದು ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದೆ.


