ಮೈಸೂರು: ಪ್ರಧಾನಿ ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ, ದೂರು ದಾಖಲು, ಬಿಜೆಪಿ ಕಿಡಿ

ಪ್ರಧಾನಿ ಮೋದಿ ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಹಲ್ಲೆಗೊಳಗಾದ ಯುವಕ
ಹಲ್ಲೆಗೊಳಗಾದ ಯುವಕ
Updated on

ಮೈಸೂರು: ಪ್ರಧಾನಿ ಮೋದಿ ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ರೋಹಿತ್ ಮೇಲೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಲ್ಲೆ ನಡೆಸಿದ್ದ ಗುಂಪು ನರೇಂದ್ರ ಮೋದಿ ಕುರಿತು ಹಾಡು ಮಾಡಿದ್ದೀಯಾ, ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಲ್ಲದೆ, ಪಾಕಿಸ್ತಾನ ಹಾಗೇ ಅಲ್ಲಾಹು ಅಕ್ಬರ್ ಘೋಷಣೆ ಕೂಗುವಂತೆ ಒತ್ತಾಯಿಸಿದರು ಎಂದು ರೋಹಿತ್ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಈ ಘಟನೆ ಸಂಬಂಧ ರೋಹಿತ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾನೆ. ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ ಘಟನೆ ಕುರಿತಂತೆ ಕಿಡಿಕಾರಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದೆ.

ಹಲ್ಲೆಗೊಳಗಾದ ಯುವಕ
ವೈಯಕ್ತಿಕ ಕಾರಣಕ್ಕೆ ನನ್ನ ಮಗಳ ಹತ್ಯೆಯಾಗಿಲ್ಲ, ಮುಖ್ಯಮಂತ್ರಿಗಳೇ.. ನಮ್ಮ ಮರ್ಯಾದೆ ತೆಗಿಬೇಡಿ: ಕಾಂಗ್ರೆಸ್​ ಕಾರ್ಪೊರೇಟರ್​ ನಿರಂಜನ್​

ರೋಹಿತ್ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com