Hit and Run Case: ಬಿಜೆಪಿ ಕಾರ್ಯಕರ್ತ ಸಾವು; ವ್ಯಾಪಕ ಪ್ರತಿಭಟನೆ, ಕೊಡಗಿನಲ್ಲಿ 144 ಸೆಕ್ಷನ್ ಜಾರಿ

ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿರುವ ಹಿನ್ನಲೆಯಲ್ಲಿ ಕೊಡಗಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
Hit and Run Case
ಕೊಡಗಿನಲ್ಲಿ ವ್ಯಾಪಕ ಪ್ರತಿಭಟನೆ
Updated on

ಕೊಡಗು: ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿರುವ ಹಿನ್ನಲೆಯಲ್ಲಿ ಕೊಡಗಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಕೊಡಗು ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚುನಾವಣೆ ಪ್ರಚಾರದ (Election campaign) ವೇಳೆ ಎಸ್ಟೀಮ್ ಕಾರು ಓಡಿಸುತ್ತಿದ್ದ ಕಾರು ಚಾಲಕ ಬಿಜೆಪಿ ಕಾರ್ಯಕರ್ತನ (BJP activist) ಮೇಲೆ ಹರಿಸಿದ ಪರಿಣಾಮ ಬಿಜೆಪಿ ಕಾರ್ಯಕರ್ತನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Hit and Run Case
ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್​ನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಪುತ್ರಿಯ ಭೀಕರ ಕೊಲೆ, ಆರೋಪಿ ಫಯಾಜ್ ಬಂಧನ

ನಿನ್ನೆ ಸಂಜೆ ಸಿದ್ದಾಪುರ ಕುಶಾಲನಗರ ಹೆದ್ದಾರಿ ನಡುವಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಲ್ನೂರು ತ್ಯಾಗತ್ತೂರಿನಲ್ಲಿ ಕೇಸರಿ ಶಾಲು, ಬಿಜೆಪಿ ಶಲ್ಯ ಧರಿಸಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಸುಂಟಿಕೊಪ್ಪ ಕಂಬಿಬಾಣೆಯ ಅನ್ಯಕೂಮಿನ ಯುವಕರ ತಂಡ (Youth Team) ಎಸ್ಟೀಮ್ ಕಾರಿನಲ್ಲಿ ವೇಗವಾಗಿ ಕಾರನ್ನು ಚಲಿಸಿ ರಸ್ತೆ ಬದಿಯಲ್ಲಿದ್ದ ಕಾರ್ಯಕರ್ತರ ಮೇಲೆ ಅಪಘಾತ (Accident) ನಡೆಸಿ ಪರಾರಿಯಾಗಿದ್ದರು.

ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಶಿವನೇಗೌಡನ ರಾಮಪ್ಪ ಎಂಬುವವರು ಸ್ಥಳದಲ್ಲೇ ಅಸುನೀಗಿದ್ದು, ಚಂದ್ರರಾಜು ಹಾಗೂ ರತೀಶ್ ಎಂಬುವವರ ಸ್ಥಿತಿ ಗಂಭೀರವಾಗಿದೆ‌. ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ

ಉದ್ದೇಶಪೂರ್ವಕ ಹತ್ಯೆಗೆ ಸಂಚು ಆರೋಪ; ವ್ಯಾಪಕ ಪ್ರತಿಭಟನೆ

ಅಪಘಾತ ನಡೆದ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ಬೆನ್ನಟ್ಟಿ ಕಾರನ್ನು ಅಡ್ಡಗಟ್ಟಿ ಅರ್ಷದ್, ಶೌಕತ್ ಎಂಬ ಯುವಕರನ್ನ ಹಿಡಿದು ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರಿನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಪ್ರದೇಶದಲ್ಲಿ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿದ್ದರು.

ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಖಂಡರು ಜಮಾಯಿಸಿ ಪಾರದರ್ಶಕ ತನಿಖೆಗೆ ಒತ್ತಾಯಿಸಿದ್ದಾರೆ. ಸಿದ್ದಾಪುರ ಗ್ರಾಮಕ್ಕೆ ಶುಕ್ರವಾರ ನೂರಾರು ಕಾರ್ಯಕರ್ತರು ಬಂದಿದ್ದು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ನೂರಾರು ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡಿದರು.

ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಮನವಿ ಮಾಡಿದರೂ ಪ್ರತಿಭಟನೆ ವಾಪಸ್ಸಾತಿಗೆ ಒಪ್ಪಲಿಲ್ಲ. ಮೃತರ ಕುಟುಂಬದವರಿಗೆ‌25 ಲಕ್ಷ ರೂ ಪರಿಹಾರ ನೀಡಬೇಕು, ಅಪಘಾತ ನಡೆಸಿದ ವಾಹನದಲ್ಲಿದ್ದ ಎಲ್ಲರನ್ನೂ ಬಂಧಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Hit and Run Case
ಲವ್ ಜಿಹಾದ್ ಹರಡುತ್ತಿದೆ, ನಿಮ್ಮ ಹೆಣ್ಣುಮಕ್ಕಳನ್ನು ನೋಡಿಕೊಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೊರೇಟರ್, ಹತ್ಯೆಯಾದ ನೇಹಾ ತಂದೆ ಮನವಿ

144 ಸೆಕ್ಷನ್ ಜಾರಿ

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಗ್ರಾಮದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸಿದ್ದಾಪುರ, ವಾಲ್ನೂರು, ಅರೆಕಾಡು, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮೃತನ ಕುಟುಂಬಸ್ಥರ ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಪಘಾತದಲ್ಲಿ ಮೃತಪಟ್ಟ ರಾಮಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಸಿದ್ದಾಪುರ ಶವಗಾರಕ್ಕೆ ಆಗಮಿಸಿದ ಮೃತ ಕಾರ್ಯಕರ್ತನ ಕುಟುಂಬಸ್ಥರಿಗೆ ಶಾಸಕ ಪೊನ್ನಣ ಸಾಂತ್ವಾನ ಹೇಳಿದರು. ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ತಪ್ಪಿತಸ್ಥರ ವಿರುದ್ದ ಕ್ರಮವಾಗುತ್ತೆ, ಸರ್ಕಾರದ ಮಟ್ಟದಲ್ಲಿ ಜಿಲ್ಲಾಮಟ್ಟದಲ್ಲಿ ಪರಿಹಾರ ಕೊಡುವ ವ್ಯವಸ್ಥೆ ಮಾಡುತ್ತೇವೆ. ಕಾನೂನನ್ನು ಉಲಂಘನೆ ಮಾಡಿದರೆ ಬಿಡುವ ಪ್ರಶ್ನೆ ಇಲ್ಲ, ಉನ್ನತ ಮಟ್ಟದ ತನಿಖೆ ಮಾಡಿಲು ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಿದ್ದೇವೆ.

ಗೃಹ ಸಚಿವರಿಗೂ ಮಾಹಿತಿ ನೀಡಿದ್ದೇವೆ ಯಾರೇ ಆದರೂ ಎಲ್ಲಿಂದ ಬಂದಿದರೂ ಕೂಡ ಕಾನೂನು ಕ್ರಮವಾಗುತ್ತೆ. ಸಂಪೂರ್ಣ ಮಾಹಿತಿ ತನಿಖೆ ಮಾಡಿದ ನಂತರ ಸತ್ಯಗೊತ್ತಾಗುತ್ತದೆ, ಒಬ್ಬರನ್ನು ಬಂಧಿಸಿದ್ದಾರೆ. ಉಳಿದವರಿಗೆ ಶೋಧ ಕಾರ್ಯನಡೆಯುತ್ತಿದೆ. ಕಾನೂನಿನ ಮೇಲೆ ನಂಬಿಕೆ ಇರಬೇಕು ಇದರಲ್ಲಿ ರಾಜಕೀಯಕ್ಕೆ ಅವಕಾಶ ಇಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ CT ರವಿ ಕಿಡಿ

ಸಿದ್ದಾಪುರಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಿ.ಟಿ.ರವಿ, 'ಸರ್ಕಾರ ನಮಗೆ ಬದುಕುವ ಗ್ಯಾರಂಟಿ ಕೊಡಬೇಕು' ಎಂದು‌ ಒತ್ತಾಯಿಸಿದರು. 'ಕೇಸರಿ ಸಾಲು ಹಾಕಿಕೊಂಡು ಪ್ರಚಾರ ಮಾಡುತ್ತಿರುವುದನ್ನು ನೋಡಿ ದುರುದ್ದೇಶದಿಂದಲ್ಲೇ ಹತ್ಯೆ ಮಾಡಲಾಗಿದೆ. ಈ ಕುರಿತು ಗೃಹ ಸಚಿವರು ಸಮಗ್ರ ತನಿಖೆ ನಡೆಸಬೇಕು. ಹುಬ್ಬಳ್ಳಿಯಲ್ಲಿಯೂ ಯುವತಿಯ ಕೊಲೆ ನಡೆದಿದೆ.

ಕೇರಳದಿಂದ ಕರ್ನಾಟಕಕ್ಕೆ‌ ಲವ್ ಜಿಹಾದ್ ಪ್ರವೇಶ ಪಡೆದಿದೆ. ಹೀಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ಚರ್ಮ ಕೋಣನ ಚರ್ಮಕ್ಕಿಂತಲೂ ದಪ್ಪ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರನ್ನು ಅನಗತ್ಯವಾಗಿ ಗುರಿ ಮಾಡಿಕೊಳ್ಳಲಾಗುತ್ತಿದೆ. ಲವ್ ಜಿಹಾದ್ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ ರಾಜ್ಯದಲ್ಲಿ ಹಿಂದೂಗಳ ಮೇಲೆ ನಾಲ್ಕು ಹಲ್ಲೆಗಳು ವರದಿಯಾಗಿವೆ. ರಾಮಪ್ಪನವರ ಸಾವಿನ ಕುರಿತು ಕಟ್ಟುನಿಟ್ಟಿನ ತನಿಖೆ ನಡೆಸಬೇಕು ಎಂದು‌ ಆಗ್ರಹಿಸಿದರು.

Hit and Run Case
ರಾಜವಂಶಸ್ಥ V/S ಜನಸಾಮಾನ್ಯ: ಮೈಸೂರು-ಕೊಡಗಿನಲ್ಲಿ ನಿರ್ಣಾಯಕವಾಗುತ್ತಾ ಒಕ್ಕಲಿಗ ಮತಗಳು?

ಅಲ್ಲದೆ ಪ್ರಕರಣದ ತನಿಖೆ ಸಮರ್ಪಕವಾಗಿ ನಡೆಯದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ರವಿ ನೀಡಿದರು. ಅಲ್ಲದೆ ಅಪಘಾತದಲ್ಲಿ ಗಾಯಗೊಂಡ ಇತರ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಪಕ್ಷದಿಂದ ಪರಿಹಾರ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com