ನಿಮ್ಮ ಸ್ವಂತ ಇಚ್ಛಾಶಕ್ತಿಯಿಂದ ಉತ್ತಮರಿಗೆ ಮತ ಚಲಾಯಿಸಿ: BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಪ್ರತಿಯೊಬ್ಬ ಯುವ ಮತದಾರರು ಚುನಾವಣಾ ರಾಯಭಾರಿಯಾಗಿದ್ದು, ಯಾವುದೇ ಪ್ರಚೋದನೆಗೆ ಒಳಗಾಗದೆ ಮತದಾನ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಪ್ರತಿಯೊಬ್ಬ ಯುವ ಮತದಾರರು ಚುನಾವಣಾ ರಾಯಭಾರಿಯಾಗಿದ್ದು, ಯಾವುದೇ ಪ್ರಚೋದನೆಗೆ ಒಳಗಾಗದೆ ಮತದಾನ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

‘ಮತಗಟ್ಟೆ ಕಡೆಗೆ ನಮ್ಮ ನಡಿಗೆ’ ಅಭಿಯಾನದ ಅಂಗವಾಗಿ ಎಂಎಸ್ ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರು ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಸ್ವಂತ ಇಚ್ಛೆಯಿಂದ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಮತ ಚಲಾಯಿಸಬೇಕು. ಅರ್ಹ ಮತದಾರರು ತಮ್ಮ ಕ್ಷೇತ್ರದ ಅಭ್ಯರ್ಥಿ ಬಗ್ಗೆ ತಿಳಿದುಕೊಂಡು ತಮ್ಮ ಅಮೂಲ್ಯವಾದ ಮತ ಚಲಾಯಿಸಬೇಕು ಎಂದರು.

'ನೀವು ಯಾವುದೇ ಅಭ್ಯರ್ಥಿಗೆ ಮತ ಹಾಕಲು ಬಯಸದಿದ್ದರೆ, ನೀವು ನೋಟಾಗೆ ಮತ ಹಾಕಬಹುದು. ‘ನಮ್ಮ ಒಂದು ಮತದಿಂದ ಏನೂ ಬದಲಾಗುವುದಿಲ್ಲ’ ಎಂಬ ಮನೋಭಾವ ಬದಲಾಗಬೇಕು, ಎಲ್ಲರೂ ಮತದಾನ ಮಾಡಬೇಕು’ ಎಂದು ಗಿರಿನಾಥ್ ಹೇಳಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
'ನಮ್ಮ ನಡೆ ಮತಗಟ್ಟೆ ಕಡೆ' ಧ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್

ನಗರದ ಮೂರು ಲೋಕಸಭಾ ಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಚಲಾವಣೆಯಾಗುವಂತೆ ನೋಡಿಕೊಳ್ಳಲು ಬಿಬಿಎಂಪಿ, ಎಂಎಸ್ ರಾಮಯ್ಯ ವೈದ್ಯಕೀಯ ಕಾಲೇಜು ಮತ್ತು ಮತದಾರರ ಲಿಟರಸಿ ಕ್ಲಬ್ ಒಟ್ಟಾಗಿ ಅಭಿಯಾನವನ್ನು ನಡೆಸುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com