ನೀತಿ ಸಂಹಿತೆ ಉಲ್ಲಂಘಿಸಿದ ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು: ಚುನಾವಣಾ ಆಯೋಗ

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಹೌಸಿಂಗ್ ಸೊಸೈಟಿಯ ನಿವಾಸಿಗಳ ಮತಯಾಚನೆ ವೇಳೆ ಕಾವೇರಿ ನೀರು ಸರಬರಾಜು ಮಾಡುವ ಭರವಸೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹೌಸಿಂಗ್ ಸೊಸೈಟಿಯ ನಿವಾಸಿಗಳ ಬಳಿ ಮತ ಯಾಚಿಸಿದ ವಿಡಿಯೋವನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ಡಿಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡು, ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು.

ಆರ್‌ಆರ್‌ ನಗರದಲ್ಲಿರುವ ಅಪಾರ್ಟ್‌ಮೆಂಟ್ ನಿವಾಸಿಗಳನ್ನು ಉದ್ದೇಶಿ ಮಾತನಾಡುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್‌ಎಸ್‌ಟಿ (ಫ್ಲೈಯಿಂಗ್ ಸ್ಕ್ವಾಡ್ ಟೀಮ್ಸ್) ಎಫ್‌ಐಆರ್ ದಾಖಲಿಸಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ಡಿಕೆ ಶಿವಕುಮಾರ್
ಮತದಾರರೊಂದಿಗೆ 'ಡೀಲ್' ವಿಡಿಯೋ ವೈರಲ್: ಡಿಸಿಎಂ ಡಿಕೆಶಿಯಿಂದ ಅಧಿಕಾರ ದುರ್ಬಳಕೆ ಎಂದ ಬಿಜೆಪಿ

ಚುನಾವಣೆಯಲ್ಲಿ ಲಂಚ ಮತ್ತು ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com