ನೇಹಾ ಹತ್ಯೆ ಪ್ರಕರಣ: ಡ್ಯಾಮೇಜ್ ಕಂಟ್ರೋಲ್ ಗೆ ಕಾಂಗ್ರೆಸ್ ಸರ್ಕಾರ ಮುಂದು; ಕಾನೂನು ಪ್ರಕಾರ ಕ್ರಮದ ಭರವಸೆ

ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯ ಸರ್ಕಾರ ಈಗ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯ ಸರ್ಕಾರ ಈಗ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಸಂಬಂಧಪಟ್ಟ ಎಲ್ಲರನ್ನು ಜೈಲಿಗೆ ಹಾಕಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

“ಸಂತ್ರಸ್ತರ ಕುಟುಂಬ ಭೇಟಿ ಮಾಡುವಂತೆ ನಾವು ಸಚಿವರಿಗೆ ಸೂಚಿಸಿದ್ದೇವೆ. ಯಾರ ಮೇಲೂ ಕರುಣೆ ಇಲ್ಲ. ಈ ಬಗ್ಗೆ ಅಲ್ಪಸಂಖ್ಯಾತ ಮುಖಂಡರೂ ಮಾತನಾಡಿದ್ದಾರೆ. ಕಾನೂನು ಪ್ರಕಾರ ಶಿಕ್ಷೆ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇದು ‘ಲವ್ ಜಿಹಾದ್’ ಕೊಲೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಬೇರೆಯವರ ಹೇಳಿಕೆಯನ್ನು ವಿವರಿಸಲು ಸಾಧ್ಯವಿಲ್ಲ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹತ್ಯೆಗೀಡಾದ ಮಹಿಳೆಯ ಮನೆಗೆ ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಸಂತ್ರಸ್ತೆಯ ತಂದೆ ನಿರಂಜನ ಹಿರೇಮಠ ಅವರು ತಮ್ಮ ಅಳಲು ತೋಡಿಕೊಂಡಿದ್ದು, ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ನೇಹಾ- ಫಯಾಜ್ ಪ್ರೀತಿಸುತ್ತಿದ್ರು.. ತಾಯಿ ಮುಮ್ತಾಜ್ ಹೇಳಿಕೆ, ಅಲ್ಲಗಳೆದ ನೇಹಾ ತಾಯಿ!

ಬಳಿಕ ಮಾತನಾಡಿದ ಸಚಿವೆ, ನಮ್ಮ ಸಮುದಾಯ ಮತ್ತು ನಾನು ಕುಟುಂಬದೊಂದಿಗೆ ನಿಲ್ಲುತ್ತೇವೆ ಎಂದು ಪೋಷಕರಿಗೆ ಭರವಸೆ ನೀಡಿದ್ದೇನೆ. ಅವರ ಮಗಳಿಗೆ ನ್ಯಾಯ ದೊರಕಿಸಿಕೊಡುತ್ತೇವೆ. ನಿಷ್ಪಕ್ಷಪಾತ ತನಿಖೆ ನಡೆಯಲಿದ್ದು, ಅದರಲ್ಲಿ ಯಾವುದೇ ಅನುಮಾನ ಬೇಡ. ಇದೊಂದು ಹೇಯ ಕೃತ್ಯವಾಗಿದ್ದು, ಇಂತಹ ಘಟನೆಗಳನ್ನು ತಡೆಯಬೇಕು. ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದರು.

ಆರೋಪಿ ಫಯಾಜ್ ಮತ್ತು ನೇಹಾ ಪ್ರೀತಿಸುತ್ತಿದ್ದರು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಸಂತ್ರಸ್ತೆಯ ಪೋಷಕರಲ್ಲಿ ಕ್ಷಮೆಯಾಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com