ಪಠ್ಯದಲ್ಲಿಲ್ಲದ 30-35 ಪ್ರಶ್ನೆ: ಸಿಇಟಿ ಪರೀಕ್ಷೆಯಲ್ಲಿ ಗೊಂದಲ ಸೃಷ್ಟಿ, ಪೋಷಕರು; ವಿದ್ಯಾರ್ಥಿಗಳ ಆಕ್ರೋಶ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ-24) ಶುಕ್ರವಾರ ಮುಕ್ತಾಯಗೊಂಡಿದ್ದು, ಬಹುತೇಕ 30-35 ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ಕಂಡು ವಿದ್ಯಾರ್ಥಿಗಲು ಗೊಂದಲಕ್ಕೊಳಗಾಗಿದ್ದರು.
ಸಿಇಟಿ ಪರೀಕ್ಷೆ
ಸಿಇಟಿ ಪರೀಕ್ಷೆ

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ-24) ಶುಕ್ರವಾರ ಮುಕ್ತಾಯಗೊಂಡಿದ್ದು, ಬಹುತೇಕ 30-35 ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ಕಂಡು ವಿದ್ಯಾರ್ಥಿಗಲು ಗೊಂದಲಕ್ಕೊಳಗಾಗಿದ್ದರು.

ಶುಕ್ರವಾರ ನಡೆದ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಯಲ್ಲಿ ಸುಮಾರು 30-35 ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ. ಗುರುವಾರ ನಡೆದ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳ ಪರೀಕ್ಷೆಯಗಳಲ್ಲಿಯೂ 20ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ರಸಾಯನ ಶಾಸ್ತ್ರ ವಿಷಯದಲ್ಲಿ ಆರು ಮತ್ತು ಭೌತಶಾಸ್ತ್ರ ವಿಷಯದಲ್ಲಿ ಐದು ಪ್ರಶ್ನೆಗಳು ಪರೀಕ್ಷೆಗೆ ನಿಗದಿತ ಪಠ್ಯಕ್ರಮದಿಂದ ಹೊರತಾಗಿದ್ದವು. ಇದು ಸಾಕಷ್ಟು ಗೊಂದಲವನ್ನುಂಟು ಮಾಡಿತ್ತು ಎಂದು ತಿಳಿಸಿದ್ದಾರೆ.

ಹಿಂದಿನ ದಿನ ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು ಮತ್ತು ಗಣಿತ ಪತ್ರಿಕೆಯಲ್ಲಿ ಒಂಬತ್ತು ಪ್ರಶ್ನೆಗಳು ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿತ್ತು. ಈ ಪ್ರಶ್ನೆಗಳು NCERT ಜೀವಶಾಸ್ತ್ರ ಪಠ್ಯಪುಸ್ತಕದ ಅಳಿಸಲಾದ ಅಧ್ಯಾಯಗಳಿಂದ ಬಂದವಾಗಿವೆಗಣಿತ ಪತ್ರಿಕೆಯಲ್ಲಿದ್ದ ಒಂಬತ್ತು ಪ್ರಶ್ನೆಗಳೂ ಪಠ್ಯಪುಸ್ತಕಗಳಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಆದರೆ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ಆರೋಪವನ್ನು ನಿರಾಕರಿಸಿದ್ದು, ಪ್ರಶ್ನೆಪತ್ರಿಕೆಗಳನ್ನು ಪಠ್ಯಕ್ರಮದ ಪ್ರಕಾರವೇ ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ.

ಸಿಇಟಿ ಪರೀಕ್ಷೆ
ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ: ಏಪ್ರಿಲ್ 18-19ಕ್ಕೆ ಎಕ್ಸಾಂ ಫಿಕ್ಸ್!

ಉತ್ತರ ಪಟ್ಟಿ ಪ್ರಕಟಿಸಿದ ನಂತರ ವಿದ್ಯಾರ್ಥಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಪ್ರಸ್ತುತ ಎದ್ದಿರುವ ವಿಚಾರ ಸಂಬಂಧ ತಜ್ಞರ ಸಮಿತಿ ಹಾಗೂ ಅಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ರಮ್ಯಾ ಅವರ ಈ ಪ್ರತಿಕ್ರಿಯೆ ವಿದ್ಯಾರ್ಥಿಗಳು ಹಾಗೂ ಪೋಷಕರ ಕಣ್ಣು ಕೆಂಪಗಾಗುವಂತೆ ಮಾಡಿದೆ. ಕರ್ನಾಟಕ ಖಾಸಗಿ ಶಾಲಾ ಕಾಲೇಜು ಪೋಷಕ ಸಂಘದ ಸಮನ್ವಯ ಸಮಿತಿಯು ರಾಜ್ಯದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, 3.50 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಾಯ ತಂದಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪರೀಕ್ಷೆ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದ ಜವಾಬ್ದಾರಿಯನ್ನು ಯಾರು ಹೊರುತ್ತಾರೆ? ಫಲಿತಾಂಶ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಸಾಕಷ್ಟು ದೂರುಗಳು ಬಂದಿವೆ. 3.50 ಲಕ್ಷ ವಿದ್ಯಾರ್ಥಿಗಳಿಂದ 20 ಕೋಟಿಗೂ ಅಧಿಕ ಹಣ ಸಂಗ್ರಹಿಸಲಾಗಿದೆ. ಮತ್ತೆ ಪರೀಕ್ಷೆಗಳು ನಡೆಸಬೇಕಾದರೆ, ಯಾರು ಹೊಣೆ ಹೊರುತ್ತಾರೆ? ಎಂದು ಸಂಘದ ಅಧ್ಯಕ್ಷ ಬಿಎನ್ ಯೋಗಾನಂದ ಪ್ರಶ್ನಿಸಿದ್ದಾರೆ.

ಅನೇಕ ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್‌ಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಪಠ್ಯಕ್ರಮವನ್ನು ಪ್ರಕಟಿಸುವ ಪೂರ್ವ-ವಿಶ್ವವಿದ್ಯಾಲಯ ಮಂಡಳಿಯು ಎನ್‌ಸಿಇಆರ್‌ಟಿ ಅಡಿಯಲ್ಲಿ ಪರಿಷ್ಕೃತ ಪಠ್ಯಕ್ರಮವನ್ನು ಜೂನ್ 2023 ರಲ್ಲಿ ಇಲಾಖೆಯ ವೆಬ್‌ಸೈಟ್‌ನಲ್ಲಿ ನವೀಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com