ನೇಹಾ ಕೊಲೆ ಪ್ರಕರಣ: ರಾಜಕೀಯಕ್ಕೆ ಒಬ್ಬರ ಸಾವು ಬಳಕೆ ಮಾಡಿಕೊಳ್ಳುತ್ತಿರುವುದು ದುರ್ದೈವ- ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಹೇಳಿಕೆ ಕುರಿತು ಮಾತನಾಡಿ, ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ, ಖಂಡನೀಯ ಎಂದು ತಿಳಿಸಿದರು.

ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು, ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಬಿಜೆಪಿಯವರ ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ
ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ: ಗೃಹ ಸಚಿವ

ಕಾಂಗ್ರೆಸ್ ನ ಚೊಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂಬ ಬಿಜೆಪಿ ತಿರುಗೇಟು ಕುರಿತು ಪ್ರತಿಕ್ರಿಯಿಸಿ, ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ. ಇದನ್ನು ತಿಳಿಸಲು ನಾವು ಜಾಹೀರಾತು ನೀಡಿದ್ದೇವೆ. ದೇಶದ ಜನರಿಗೆ 15 ಲಕ್ಷ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್ ಬಂದಿದೆಯೇ? ಎಂದು ಪ್ರಶ್ನಿಸಿದರು.

ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೊಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿ ಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com