ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಚೊಂಬು ಪ್ರದರ್ಶಿಸಿದ ನಲಪಾಡ್ ಅಂಡ್ ಗ್ಯಾಂಗ್, ನೋಡುತ್ತಾ ನಿಂತ ಪೊಲೀಸರು, ವಿಡಿಯೋ!

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ.
ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ
ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆPTI

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ. ಅರಮನೆ ಮೈದಾನದಿಂದ ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ಗೆ ತೆರಳುವಾಗ ಮೇಕ್ರಿ ಸರ್ಕಲ್‌ ಬಳಿ ರಾಜ್ಯ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಹಾಗೂ ಬೆಂಬಲಿಗರು ರಸ್ತೆಗೆ ನುಗ್ಗಿ ಪ್ರಧಾನಿ ಮೋದಿಗೆ ಚೆಂಬು ಪ್ರದರ್ಶಿಸಿದ್ದಾರೆ. ಹೀಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ಪ್ರಧಾನಿ ಮೋದಿ ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ನಲಪಾಡ್ ಗ್ಯಾಂಗ್ ರಸ್ತೆಗೆ ಇಳಿದು ಚೊಂಬು ಪ್ರದರ್ಶಿಸಲು ಮುಂದಾಗಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.

ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ
ಟೆಕ್ ಸಿಟಿ ಈಗ ಟ್ಯಾಂಕರ್ ಸಿಟಿ ಆಗಿದೆ: ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಭಾರೀ ಬಂದೋಬಸ್ತ್ ಇದ್ದರೂ ಭದ್ರತಾ ಲೋಪ

ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಅಲ್ಲದೆ ಬಂದೋಬಸ್ತ್​​ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೂ ನಲಪಾಡ್ ಗ್ಯಾಂಗ್ ಭದ್ರತೆಯನ್ನು ಲೆಕ್ಕಿಸದೆ ಆಟಾಟೋಪ ಮೆರೆದಿದ್ದಾರೆ.

ಅರಮನೆ ಮೈದಾನದಲ್ಲಿ ಪ್ರಚಾರ ಸಭೆಯ ನಂತರ ಮೋದಿ ಅವರ ಬೆಂಗಾವಲು ಪಡೆ ತೆರಳಬೇಕಿದ್ದ ಮಾರ್ಗದ ಸಮೀಪವಿರುವ ಬೈ-ಲೇನ್‌ನಲ್ಲಿ ಖಾಲಿ 'ಚೊಂಬು' ಹಿಡಿದು ಪ್ರತಿಭಟನೆ ನಡೆಸಲು ಮೊಹಮ್ಮದ್ ನಲಪಾಡ್ ಹಾಗೂ ಸಂಗಡಿಗರು ಪ್ರಯತ್ನಿಸಿದರು. ಹೀಗಾಗಿ ನಾವು ಇಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ. ಇಲ್ಲಿ ಯಾವುದೇ ರೀತಿಯ ಭದ್ರತಾ ಉಲ್ಲಂಘನೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com