ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ: ಅಪರಾಧಿ ಗಲ್ಲು ಶಿಕ್ಷೆಗೆ ಅರ್ಹ- ಸಚಿವ ಎಂಬಿ ಪಾಟೀಲ್

ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆಯು ಹೇಯ ಕೃತ್ಯವಾಗಿದ್ದು, ಅಪರಾಧಿ ಮರಣದಂಡನೆಗೆ ಅರ್ಹ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶನಿವಾರ ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹಿರೇಮಠ್ ಅವರನ್ನು ಸಹಪಾಠಿ ಫಯಾಜ್ ಎಂಬಾತ ಕಾಲೇಜು ಆವರಣದಲ್ಲಿಯೇ ಹತ್ಯೆ ಮಾಡಿದ್ದ.
ಸಚಿವ ಎಂಬಿ ಪಾಟೀಲ್
ಸಚಿವ ಎಂಬಿ ಪಾಟೀಲ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆಯು ಹೇಯ ಕೃತ್ಯವಾಗಿದ್ದು, ಅಪರಾಧಿ ಮರಣದಂಡನೆಗೆ ಅರ್ಹ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶನಿವಾರ ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹಿರೇಮಠ್ ಅವರನ್ನು ಸಹಪಾಠಿ ಫಯಾಜ್ ಎಂಬಾತ ಕಾಲೇಜು ಆವರಣದಲ್ಲಿಯೇ ಹತ್ಯೆ ಮಾಡಿದ್ದ.

ಘಟನೆ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಎಂಬಿ ಪಾಟೀಲ್, ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು. ಇಂತಹ ಪ್ರಕರಣಗಳಲ್ಲಿ ದುಷ್ಕರ್ಮಿಗಳಿಗೆ ವಿಳಂಬ ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ವಿಳಂಬ ತಪ್ಪಿಸಲು ತ್ವರಿತ ನ್ಯಾಯಾಲಯಗಳಲ್ಲಿ ಇಂತಹ ಪ್ರಕರಣಗಳ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಸಚಿವ ಎಂಬಿ ಪಾಟೀಲ್
ನೇಹಾಳ ಬರ್ಬರ ಹತ್ಯೆ ಸಮರ್ಥಿಸಿ ಕಿಡಿಗೇಡಿಗಳಿಂದ ಪೋಸ್ಟ್: ಇನ್ ಸ್ಟಾಗ್ರಾಂನಲ್ಲಿ ವಿಕೃತಿ ಮೆರೆದ ಸಾದಿಕ್-ಆದಿಲ್!

ಮರಣದಂಡನೆ ವಿಧಿಸುವುದರಿಂದ ಇಂತಹ ಘಟನೆಗಳು ಮರುಕಳಿಸುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ. ವಿದ್ಯಾರ್ಥಿನಿಯೊಬ್ಬಳ ಹತ್ಯೆಯು ಅತ್ಯಂತ ಖಂಡನೀಯ ಮತ್ತು ಇದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದರು.

ಘಟನೆಯಲ್ಲಿ ತಪ್ಪಿತಸ್ಥರ ಶಿಕ್ಷೆಗೆ ರಾಜ್ಯ ಸರ್ಕಾರ ಶ್ರಮಿಸಲಿದೆ. ಇಂತಹ ಘೋರ ಅಪರಾಧಗಳಲ್ಲಿ ತಪ್ಪಿತಸ್ಥರಿಗೆ ಮರಣದಂಡನೆಗೆ ಅವಕಾಶ ನೀಡುವ ಕಾನೂನುಗಳನ್ನು ರೂಪಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು. ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾದವರಿಗೆ ಮರಣದಂಡನೆ ವಿಧಿಸುವ ಅವಕಾಶವೂ ಇರಬೇಕು ಎಂದು ಅವರು ಹೇಳಿದರು.

ಸಚಿವ ಎಂಬಿ ಪಾಟೀಲ್
ನೇಹಾ ಕೊಲೆ ಪ್ರಕರಣ: ರಾಜಕೀಯಕ್ಕೆ ಒಬ್ಬರ ಸಾವು ಬಳಕೆ ಮಾಡಿಕೊಳ್ಳುತ್ತಿರುವುದು ದುರ್ದೈವ- ಸಿಎಂ ಸಿದ್ದರಾಮಯ್ಯ

ಘಟನೆ ನಂತರ, ಬಿಜೆಪಿ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು, ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹುಬ್ಬಳ್ಳಿ ಕ್ಯಾಂಪಸ್ ಕೊಲೆ ವೈಯಕ್ತಿಕ ಕಾರಣಗಳಿಂದ ಸಂಭವಿಸಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಅದನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

'ಇದು ಲವ್ ಜಿಹಾದ್ ಪ್ರಕರಣವಲ್ಲ, ಘಟನೆಯನ್ನು ಖಂಡಿಸುತ್ತೇನೆ. ಆರೋಪಿಯನ್ನು ಬಂಧಿಸಿದ್ದೇವೆ. ತನಿಖೆ ಗಂಭೀರವಾಗಿ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುತ್ತೇವೆ. ಶಾಂತಿ ಸೌಹಾರ್ದತೆ ಕಾಪಾಡಲು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬಿಜೆಪಿ ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು (ಬಿಜೆಪಿ) ಬಾಲಕಿಯ ಕೊಲೆಯನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com