ಸಚಿವ ಕೃಷ್ಣ ಬೈರೇಗೌಡ
ಸಚಿವ ಕೃಷ್ಣ ಬೈರೇಗೌಡ

ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಕರ್ನಾಟಕಕ್ಕೆ ಬರ ಪರಿಹಾರ ಸಿಗಬಹುದು: ಸಚಿವ ಕೃಷ್ಣ ಬೈರೇಗೌಡ

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಬರ ಪರಿಹಾರ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭಾನುವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಬೆಂಗಳೂರು: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಬರ ಪರಿಹಾರ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭಾನುವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದ್ದು, ಸಚಿವರು ಭಾನುವಾರ ರಾಷ್ಟ್ರ ರಾಜಧಾನಿಗೆ ತೆರಳಿ ವಕೀಲರೊಂದಿಗೆ ಚರ್ಚೆ ನಡೆಸಿದರು.

'ಏಪ್ರಿಲ್ 8 ರಂದು, ಸುಪ್ರೀಂ ಕೋರ್ಟ್ ಪ್ರಕರಣವನ್ನು ಆಲಿಸಿತು. ಈ ಸಂದರ್ಭದಲ್ಲಿ ಕೇಂದ್ರವನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಎರಡು ವಾರಗಳ ಕಾಲಾವಕಾಶ ಕೋರಿದರು ಮತ್ತು ಈ ವಿಚಾರಣೆಯನ್ನು ಸೋಮವಾರಕ್ಕೆ ಪಟ್ಟಿ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ರಾಜ್ಯದ ರೈತರಿಗೆ ಬರಬೇಕಾದ ಬರ ಪರಿಹಾರ ನಿಧಿ ಸಿಗಲಿದೆ ಎಂದು ಭಾವಿಸುತ್ತೇವೆ' ಎಂದು ಹೇಳಿದರು.

ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಮಟ್ಟದ ಸಮಿತಿ (ಎಚ್‌ಎಲ್‌ಸಿ) ಸಭೆ ನಡೆಯಲಿಲ್ಲ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಾರ್ಚ್ 15 ರಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 2023ರ ನವೆಂಬರ್ 13ರಂದು ಬರ ಪರಿಹಾರ ಹಣ ಬಿಡುಗಡೆ ಕೋರಿ ರಾಜ್ಯ ಸರ್ಕಾರವು ವರದಿ ಸಲ್ಲಿಸಿದೆ. ಆದರೆ, ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ರಾಜ್ಯವು ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ ಎಂದರು.

ಸಚಿವ ಕೃಷ್ಣ ಬೈರೇಗೌಡ
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ಆದರೆ, ವರದಿ ಸಲ್ಲಿಕೆ ವಿಳಂಬವಾಗಿರುವುದರಿಂದ ಹಣ ಬಿಡುಗಡೆ ವಿಳಂಬವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಆದಾಗ್ಯೂ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕಕ್ಕೆ ಬರ ಪರಿಹಾರದ ಅನುದಾನ ಬಿಡುಗಡೆ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ. ಉನ್ನತಾಧಿಕಾರ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಅನುಮತಿ ಬಾರದಿರುವುದು ವಿಳಂಬಕ್ಕೆ ಕಾರಣ ಎಂದು ಒಪ್ಪಿಕೊಂಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com